• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿರಿಯ ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ

Coastal Times by Coastal Times
December 8, 2023
in ಸಿನಿಮಾ
ಹಿರಿಯ ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ
77
VIEWS
WhatsappTelegramShare on FacebookShare on Twitter

ಬೆಂಗಳೂರು: ಕನ್ನಡದ ಕಲಾಸರಸ್ವತಿ ಲೀಲಾವತಿ  ಇನ್ನಿಲ್ಲ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಮೇರುನಟಿ ಶುಕ್ರವಾರ (ಡಿಸೆಂಬರ್‌ 8) ಸಂಜೆ ನೆಲಮಂಗಲದ ತೋಟದ ಮನೆಯಲ್ಲಿ  ಕೊನೆಯುಸಿರೆಳೆದರು.

86 ವರ್ಷಗಳ ಸುದೀರ್ಘ ಜೀವನದಲ್ಲಿ ಹೋರಾಟದ ಕೆಚ್ಚಿನಿಂದಲೇ ಬದುಕಿನದ ಅವರು ಕೆಲವು ತಿಂಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲದ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದ ಅವರಿಗೆ ಶುಕ್ರವಾರ ಸಂಜೆ ಆರೋಗ್ಯ ತೀವ್ರವಾಗಿ ಕೈಕೊಟ್ಟಿತು. ಊರಿಗೊಂದು ಪಶು ಆಸ್ಪತ್ರೆ ಕಟ್ಟಿಸಬೇಕು ಎಂಬ ಕೊನೆಯಾಸೆಯನ್ನು ಇತ್ತೀಚೆಗಷ್ಟೇ ಅವರು ತಮ್ಮ ಮಗ ವಿನೋದ್‌ ರಾಜ್‌ ಮೂಲಕ ನೆರವೇರಿಸಿಕೊಂಡಿದ್ದರು.

ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ ಬಳಿ ಪುತ್ರ ವಿನೋದ್​ ರಾಜ್​ ಜೊತೆ ವಾಸವಾಗಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ವಿನೋದ್​ ರಾಜ್​ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ದರ್ಶನ್​, ಅಭಿಷೇಕ್​ ಅಂಬರೀಷ್​, ಅರ್ಜುನ್​ ಸರ್ಜಾ, ಡಿ.ಕೆ. ಶಿವಕುಮಾರ್​, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಬಂದು ವಿನೋದ್​ ರಾಜ್​ಗೆ ಧೈರ್ಯ ತುಂಬಿದ್ದರು.

1937ರಲ್ಲಿ ಲೀಲಾವತಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದರು. 1949ರಲ್ಲಿ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನ ಪ್ರವೇಶಿಸಿದರು. ಅಲ್ಲಿಂದ ಬಳಿಕ ಸುಮಾರು 6 ದಶಕಗಳ ಕಲಾಸೇವೆ ಮಾಡಿದ್ದು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿದ್ದಾರೆ. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಜನ್ಮ ತಳೆದ ರಂಗಭೂಮಿಯ ಶಕ್ತಿ : ಲೀಲಾವತಿ ಅವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ಚಿಕ್ಕಂದಿನಲ್ಲೇ ನಾಟಕ, ರಂಗಭೂಮಿಯ ಸೆಳೆತ ಅವರಿಗಿತ್ತು. ಮೈಸೂರಿನಲ್ಲಿ ಸುಬ್ಬಯ್ಯ ನಾಯ್ಡು ಅವರ ವೃತ್ತಿ ರಂಗಭೂಮಿಯಲ್ಲಿ ತಾಲೀಮು ಶುರುವಾಗಿ ಬಳಿಕ ಮಹಾಲಿಂಗ ಭಾಗವತರ್‌ ಅವರ ತಂಡದಲ್ಲಿ ಸಕ್ರಿಯರಾದರು.

ಚಿಕ್ಕಂದಿನಲ್ಲೇ ಹತ್ತಾರು ನಾಟಕಗಳಲ್ಲಿ ಅಭಿನಯಿಸಿದ್ದ ಲೀಲಾವತಿ ಅವರು 11ನೇ ವಯಸ್ಸಿನಲ್ಲೇ ಸಿನಿರಂಗಕ್ಕೆ ಕಾಲಿಟ್ಟಿದ್ದರು. 1949ರಲ್ಲಿ ತೆರೆಕಂಡ ನಾಗಕನ್ನಿಕಾ ಚಿತ್ರದಲ್ಲಿ ಸಖಿ ಚಂಚಲಕುಮಾರಿ ಎಂಬ ಪಾತ್ರದಿಂದ ಚಂದನವನಕ್ಕೆ ಎಂಟ್ರಿ ಪಡೆದರು. ಅಲ್ಲಿಂದ ಮುಂದೆ ಡಾ. ರಾಜ್‌ಕುಮಾರ್‌ ಸೇರಿದಂತೆ ಎಲ್ಲ ಹಿರಿಯ ನಟರ ಜತೆಗೆ ಸರಿಸಮನಾಗಿ ನಟಿಸಿ ದೊಡ್ಡ ಮಟ್ಟದ ಸಾಧಕಿ ಎನಿಸಿದರು. ನಾಯಕಿಯಾಗಿ ಅವರು ನಟಿಸಿದ ಮೊದಲ ಚಿತ್ರ 1958ರಲ್ಲಿ ತೆರೆಕಂಡ ಮಾಂಗಲ್ಯ ಯೋಗ. ಡಾ.ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದಿಂದ ರಾಜ್-ಲೀಲಾವತಿ ಜೋಡಿ ಜನಪ್ರಿಯವಾಯಿತು. ಅಣ್ಣಾವ್ರ ಚಿತ್ರಗಳಲ್ಲಿ ನಾಯಕಿ, ಪೋಷಕ ನಟಿಯಾಗಿ ಅಭಿನಯಿಸಿದ ಅವರು, ಒಟ್ಟು 46 ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಣ್ಣಾವ್ರ ನಾಯಕಿಯಾದರು.

ರಾಜ್‌ಕುಮಾರ್‌, ಕಲ್ಯಾಣ್‌‌ಕುಮಾರ್‌, ಉದಯಕುಮಾರ್‌ ಮಾತ್ರವಲ್ಲ, ಮುಂದಿನ ಹಂತದ ನಾಯಕರಾದ ಅಂಬರೀಷ್‌, ಪ್ರಭಾಕರ್‌, ವಿಷ್ಣುವರ್ಧನ್‌, ಅನಂತ್‌ನಾಗ್‌, ಶಂಕರ್‌ನಾಗ್‌ ಸೇರಿ ಕನ್ನಡದ ಪ್ರಮುಖ ನಾಯಕರ ಚಿತ್ರಗಳಲ್ಲಿ ನಟನೆ ಮಾಡಿದರು. 201೦ರವರೆಗೂಗೂ ನಟಿಸಿದ ಲೀಲಾವತಿ ತಮ್ಮ ಮಗ ವಿನೋದ್‌ ರಾಜ್‌ ಅವರ ಕನ್ನಡದ ಕಂದ ಚಿತ್ರದಲ್ಲಿ ನಟಿಸಿದ್ದರು. ವಿನೋದ್‌ ರಾಜ್‌ ಅವರು ಅಮ್ಮನನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಮತ್ತೆ ವ್ಯಾಪಾರದಲ್ಲಿ ಧರ್ಮ ದಂಗಲ್: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮುಸ್ಲಿಂ ವ್ಯಾಪಾರಿಗಳ ಆಕ್ರೋಶ

Next Post

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d