ಉಳ್ಳಾಲ, ಡಿ.8: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶನಿವಾರ ಮಧ್ಯರಾತ್ರಿ ನಾಟೆಕಲ್ ಮಂಜನಾಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಮಂಜನಾಡಿಯ ಖಂಡಿಕ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಸ್ಫೋಟ ನಡೆದಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಮನೆಯೊಳಗಡೆ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ತೀವ್ರತೆಗೆ ತಾರಸಿ ಮನೆಯ ಮೇಲ್ಭಾಗದ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ,ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿಧ್ರಗೊಂಡು ಸುಟ್ಟು ಕರಕಲಾಗಿದೆ.
ತಾಯಿ ಮಕ್ಕಳು ಮಲಗಿದ ಮಂಚ ಸಂಪೂರ್ಣ ಸುಟ್ಟು ಕರಕಲಾಗಿವೆ.ಈ ಸಂದರ್ಭ ತಾಯಿ ಜೊತೆ ಮಲಗಿದ್ದ ದೊಡ್ಡ ಮಗಳು ಬಾಗಿಲು ತೆರೆದಿದ್ದು, ತಕ್ಷಣ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post