ನವದೆಹಲಿ, ಜ.09: ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿದೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದಲ್ಲಿ ಕೋವಿಡ್ ಸ್ಥಿತಿಗತಿಯ ಅವಲೋಕನಕ್ಕಾಗಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಿಷನ್ ಮೋಡ್‌ನಲ್ಲಿ ಹದಿಹರೆಯದವರಿಗೆ ಲಸಿಕೆ ಚಾಲನೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಪ್ರಧಾನಿ ಮೋದಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
15-18ರ ವಯಸ್ಸಿನವರ ಲಸಿಕೀಕರಣದ ವೇಗವನ್ನು ಹೆಚ್ಚಿಸುವಂತೆ ಸಭೆಯಲ್ಲಿ ಹೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಮತ್ತು ಕಣ್ಗಾವಲು ವ್ಯವಸ್ಥೆ ಮುಂದುವರಿಸಬೇಕು ಎಂದು ಹೇಳಿದರು.
ಇನ್ನು ಕೋವಿಡ್ ಪ್ರಕರಣಗಳು ಅಧಿಕವಾಗಿ ದಾಖಲಾಗುವ ರಾಜ್ಯಗಳಿಗೆ ಅಗತ್ಯವಾದ ತಾಂತ್ರಿಕ ಬೆಂಬಲವನ್ನು ಒದಗಿಸುವುದಾಗಿ ಪ್ರಧಾನಮಂತ್ರಿ ಭರವಸೆ ನೀಡಿದ್ದಾರೆ. ಹಾಗೆಯೇ ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ರಾಜ್ಯದ ಕೋವಿಡ್ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಕ್ರಮ ಹಾಗೂ ಸಾರ್ವಜನಿಕ ಕ್ರಮಗಳನ್ನು ಚರ್ಚೆ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆಯಲಾಗುವುದು ಎಂದು ಕೂಡಾ ಪ್ರಧಾನ ಮೋದಿ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಾಣುತ್ತಿರುದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ.
ಪರಿಶೀಲನಾ ಸಭೆಯಲ್ಲಿ, ಪ್ರಧಾನಿ ಮೋದಿ ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯಗಳೊಂದಿಗೆ ಸಮನ್ವಯತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮಧ್ಯೆ, ಲಸಿಕೆ ಹಾಕುವ ಕಾರ್ಯವು ಭರದಿಂದ ಸಾಗುತ್ತಿದೆ. ನಿನ್ನೆಯವರೆಗೆ 15-18 ವರ್ಷ ವಯಸ್ಸಿನವರಿಗೆ 20 ದಶಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಲಾಗುತ್ತದೆ. ದೇಶದಲ್ಲಿ ಕೋವಿಡ್-19 ಲಸಿಕೆಗಳ ಸಂಖ್ಯೆ 151.58 ಕೋಟಿ ತಲುಪಿದೆ.
Discover more from Coastal Times Kannada
Subscribe to get the latest posts sent to your email.
Discussion about this post