• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಗಾಂಜಾ, ಎಂಡಿಎಂ ಮಾದಕ ವಸ್ತು ಪ್ರಕರಣ – ಮೂವರ ಬಂಧನ

Coastal Times by Coastal Times
January 9, 2023
in ಕ್ರೈಮ್ ನ್ಯೂಸ್
ಮಂಗಳೂರು: ಗಾಂಜಾ, ಎಂಡಿಎಂ ಮಾದಕ ವಸ್ತು ಪ್ರಕರಣ – ಮೂವರ ಬಂಧನ
43
VIEWS
WhatsappTelegramShare on FacebookShare on Twitter

ಮಂಗಳೂರು, ಜ 08 : ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಘಟನೆಯಲ್ಲಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕಿರಣ್ ರಾಜ್ ಶೆಟ್ಟಿ: ಕಾಸರಗೋಡು ಬಂಬ್ರಾಣ ಮೊಗೇರು ನಿವಾಸಿ ಕಿರಣ್‌ ರಾಜ್‌ ಶೆಟ್ಟಿ(24) ಎಂಬಾತನನ್ನು ಬಂಧಿತ ಆರೋಪಿ. ಈತನಿಂದ ಪೊಲೀಸರು 27.100 ಕೇಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರ ತಂಡ ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದೆ. ಆರೋಪಿಯಿಂದ ಆಲ್ಟೋ ಕಾರು, 27.100 ಕೆಜಿ ಗಾಂಜಾ, ಮೊಬೈಲ್ ಫೋನ್, ನಗದು 1500 ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಮೌಲ್ಯ 9,88,500 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಯು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಆರೋಪಿ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ.

ನೀಲ್ ಕಿಶೋರಿಲಾಲ್ ರಾಮ್ ಜಿ ಶಾ: ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಹಾಗು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ಗಾಂಜಾ ಸೇರಿದಂತೆ ಅನೇಕ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಗರೋತ್ತರ ಭಾರತೀಯ ಪ್ರಜೆಯಾಗಿರುವ ನೀಲ್ ಕಿಶೋರಿಲಾಲ್ ರಾಮ್ ಜಿ. ಶಾ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಬಂಟ್ಸ್ ಹಾಸ್ಟೆಲ್ ಪರಿಸರದ ಫ್ಲಾಟ್ ವೊಂದರಲ್ಲಿ ವಾಸವಿದ್ದ ಈತ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನಿಂದ ಒಟ್ಟು 2 ಕೆ. ಜಿ ತೂಕದ 50 ಸಾವಿರ ರೂಪಾಯಿ ಮೌಲ್ಯದ ಗಾಂಜಾ, 2 ಮೊಬೈಲ್ ಫೋನ್, 7 ಸಾವಿರ ರೂಪಾಯಿ ನಗದು ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈತನಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಆಂದಾಜು 78 ಸಾವಿರ ರೂಪಾಯಿ ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ. ಇನ್ನು ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ಖರೀದಿಸಿಕೊಂಡು ಬಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಾಝ್: ಮಂಗಳೂರು: ಮಾದಕ ವಸ್ತು ಎಂಡಿಎಂಎಯನ್ನು ಕೇರಳ-ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಿಪು ಕೈರಂಗಳ ಗ್ರಾಮದ ನಿವಾಸಿ ನವಾಝ್‌ ಯಾನೆ ನವ್ವಾ ಯಾನೆ ಮುಡಿಪು ನವಾಸ್‌(35) ಬಂಧಿತ ಆರೋಪಿ. ಎಂಬಾತನನ್ನು ಈತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿವೆ. ಕೇರಳದ ಗಡಿಭಾಗ ಹಾಗೂ ಮುಡಿಪು ಪರಿಸರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತ್ರತ್ವದ ತಂಡ ಮುಡಿಪು ಪಂಚಾಯತ್ ಮೈದಾನ ಪರಿಸರದಲ್ಲಿ ಬೈಕ್ ನಲ್ಲಿ ಬಂದು ಮಾರಾಟ ಮಾಡುತ್ತಿದ್ದಾಗ ಬಂಧಿಸಿದೆ. ಈತನಿಂದ ಒಟ್ಟು 15 ಗ್ರಾಂ ತೂಕದ 75,000 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, ಮೊಬೈಲ್ ಫೋನ್ -2, ಡಿಜಿಟಲ್ ತೂಕ ಮಾಪನ, ನಗದು ರೂ. 3200 ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಮೌಲ್ಯ 1,13,700 ರೂಪಾಯಿ ಎಂದು ಅಂದಾಜಿಸಲಾಗಿದೆ.

ದೇರಳಕಟ್ಟೆ, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಆರೋಪಿ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ದರೋಡೆಗೆ ಸಂಬಂಧಪಟ್ಟಂತೆ ಒಟ್ಟು 8 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ , ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣ ಹೀಗೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕರ್ನಾಟಕ ವಿಧಾನಸಭಾ ಚುನಾವಣೆ: ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಸ್‌ಡಿಪಿಐ

Next Post

‘ಬಾರಿ ಎಡ್ಡೆ ಗೊಬ್ಬಿಯ’ ಸೂರ್ಯ ಎಂದ ರಾಹುಲ್ – ಚೂರ್ ತುಳು ಕಲ್ಪಾವೊಡು ಆರೆಗ್ ನನ – ಪತ್ನಿ ದೀವಿಶಾ ಶೆಟ್ಟಿ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
Next Post
‘ಬಾರಿ ಎಡ್ಡೆ ಗೊಬ್ಬಿಯ’ ಸೂರ್ಯ ಎಂದ ರಾಹುಲ್ –  ಚೂರ್ ತುಳು ಕಲ್ಪಾವೊಡು ಆರೆಗ್ ನನ – ಪತ್ನಿ ದೀವಿಶಾ ಶೆಟ್ಟಿ

‘ಬಾರಿ ಎಡ್ಡೆ ಗೊಬ್ಬಿಯ’ ಸೂರ್ಯ ಎಂದ ರಾಹುಲ್ – ಚೂರ್ ತುಳು ಕಲ್ಪಾವೊಡು ಆರೆಗ್ ನನ - ಪತ್ನಿ ದೀವಿಶಾ ಶೆಟ್ಟಿ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d