ಕೋಲಾರ: ಕೋಲಾರದಲ್ಲಿ ರೈಲಿಗೆ ಸಿಲುಕಿ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ವಿದ್ಯುತ್ ಕಡಿತದಿಂದಾಗಿ ರೈಲುಗಳು ಮಾರ್ಗ ಮಧ್ಯೆ ನಿಂತಿದ್ದವು. ಅದೇ ಸಂದರ್ಭದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ರೈಲ್ವೆ ಅಧಿಕಾರಿಗಳು ಸಿಗ್ನಲ್ ನೀಡಿದ್ದು, ರೈಲು ಇಳಿದು ಹಳಿ ಮೇಲೆ ಪ್ರಯಾಣಿಕರು ನಿಂತಿದ್ದರು.
Video of Shatabdi Express at Taykal. Public from two passenger trains seen walking on the tracks before its arrival @ExpressKolar pic.twitter.com/WxZVytSMXM
— S. Lalitha (@Lolita_TNIE) March 9, 2022
ಈ ವೇಳೆ ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ರೈಲು ವೇಗವಾಗಿ ನುಗ್ಗಿ ಬಂದಿದ್ದು, ಪ್ರಯಾಣಿಕರು ಬಚಾವ್ ಆಗಲು ಯತ್ನಿಸುವ ವೇಳೆಗೆ ಡಿಕ್ಕಿ ಹೊಡೆದಿದೆ. ಲೋಕೋ ಪೈಲಟ್ ಸತತವಾಗಿ ಹಾರ್ನ್ ಮಾಡುತ್ತಿದ್ದರೂ ಕೂಡ ಜನ ಹಳಿ ಮೇಲೆ ನಿಂತಿದ್ದರು. ಹೀಗಾಗಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.
ಟೇಕಲ್ ಹೊರಠಾಣೆ, ಬಂಗಾರಪೇಟೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.