ಗುಂಡ್ಲುಪೇಟೆ: ಬಂಡೀಪುರ ಸಫಾರಿ ಮುಗಿಸಿಕೊಂಡು ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಕರ್ ಪ್ರಶಸ್ತಿ ವಿಜೇತ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿರುವ ಕಾವಾಡಿ ದಂಪತಿ, ಬೊಮ್ಮ-ಬೆಳ್ಳಿ ಅವರೊಂದಿಗೆ ಆತ್ಮೀಯವಾಗಿ ಬೆರೆತರು.
ಹುಲಿ ಯೋಜನೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಈ ವೇಳೆ ಓಪನ್ ಜೀಪ್ನಲ್ಲಿ ಸುಮಾರು 15 ಕಿ.ಮೀ ವನ್ಯಜೀವಿ ಸಫಾರಿ ಕೈಗೊಂಡರು. ಟೋಪಿ, ಗಾಗಲ್ಸ್ ಜೊತೆಗೆ ಸಫಾರಿ ದಿರಿಸಿನಲ್ಲಿ ಅರಣ್ಯದಲ್ಲಿ ಮೋದಿ ಸಂಚರಿಸಿದರು. ವಿಶೇಷ ಹೆಲಿಕಾಫ್ಟರ್ನಲ್ಲಿ ಪ್ರಧಾನಿ ಬಂಡೀಪುರಕ್ಕೆ ಆಗಮಿಸಿದ್ದರು. ಈ ವೇಳೆ ಅಂಚೆ ಚೀಟಿ ಬಿಡುಗಡೆ, ಬಂಡೀಪುರದಲ್ಲಿ ಹಳೇ ಸಫಾರಿ ಕೇಂದ್ರದ ಬಳಿ ಇರುವ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಕಳ್ಳಬೇಟೆ ತಡೆ ಶಿಬಿರಕ್ಕೂ ಭೇಟಿ ನೀಡಿದರು. ಈ ವೇಳೆ ಅವರೊಂದಿಗೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಮತ್ತು ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು. ನಂತರ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ತೆಪ್ಪಕಾಡಿನ ಆನೆ ಶಿಬಿರಕ್ಕೆ ಮೋದಿ ಭೇಟಿ ನೀಡಿದರು. ಈ ವೇಳೆ ವಿಹರಿಸಿದ ಗಜಪಡೆಗಳಿಗೆ ಕಬ್ಬು ತಿನ್ನಿಸಿದ ಪ್ರಧಾನಿ, ಟಿ23 ಹುಲಿ ಸೆರೆ ಹಿಡಿದ ಮೂವರು ಸಿಬ್ಬಂದಿ ಮತ್ತು ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಯನ್ನೂ ಗೌರವಿಸಿದರು.
What a delight to meet the wonderful Bomman and Belli, along with Bommi and Raghu. pic.twitter.com/Jt75AslRfF
— Narendra Modi (@narendramodi) April 9, 2023
Discover more from Coastal Times Kannada
Subscribe to get the latest posts sent to your email.
Discussion about this post