ಮೂಡುಬಿದಿರೆ: ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ರಾಜ್ಯಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ನೂರಕ್ಕೆ ನೂರು ಅಂಕ: ಮೂಡುಬಿದಿರೆ ಮೂಲದವರೇ ಆಗಿರುವ ದಿಶಾ ಅಪ್ರತಿಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ 600 (ಶೇ.100) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಯು ಇಡೀ ರಾಜ್ಯದ ಗಮನ ಸೆಳೆದಿದೆ.
ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಮನೆಮಾಡಿದೆ. ವಿದ್ಯಾರ್ಥಿನಿಯ ಸಾಧನೆಯನ್ನು ಕಂಡು ಹರ್ಷ ವ್ಯಕ್ತಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದಿಶಾ ಅವರಿಗೆ ಅಭಿನಂದಿಸಿದರು.
ಫಲಿತಾಂಶ ಸೈಟ್ ವಿವರ: https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗಿದೆ.
ಅಂಕಪಟ್ಟಿಯನ್ನು ಡಿಜಿಲಾಕರ್ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವವರು ವಿಡಿಯೋ ಲಿಂಕ್ https://tinyurl.com/mw84wmh9 ಮೂಲಕ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದು.
Discover more from Coastal Times Kannada
Subscribe to get the latest posts sent to your email.







Discussion about this post