• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ.ಜಿಲ್ಲಾದ್ಯಂತ ಮತದಾನದ ಹಿನ್ನೆಲೆ ವಿಶೇಷ ಪೊಲೀಸ್ ಬಂದೋಬಸ್ತ್ , ಚುನಾವಣೆಗೆ ಜಿಲ್ಲಾಡಳಿತ ಸಜ್ಜು

Coastal Times by Coastal Times
May 9, 2023
in ಕರಾವಳಿ
ದ.ಕ.ಜಿಲ್ಲಾದ್ಯಂತ ಮತದಾನದ ಹಿನ್ನೆಲೆ ವಿಶೇಷ ಪೊಲೀಸ್ ಬಂದೋಬಸ್ತ್ , ಚುನಾವಣೆಗೆ ಜಿಲ್ಲಾಡಳಿತ ಸಜ್ಜು
32
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 9: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಮತದಾನದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾದ್ಯಂತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಜಿಲ್ಲೆಯಲ್ಲಿ 4,500ಕ್ಕೂ ಅಧಿಕ ಪೊಲೀಸ್/ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ 8 ಕ್ಷೇತ್ರಗಳ 1,860 ಮತಗಟ್ಟೆಗಳಲ್ಲಿ ಮತದಾರರು ಮತ ಚಲಾಯಿಸುವರು. ಇದಕ್ಕಾಗಿ 2,235 ಬ್ಯಾಲೆಟ್‌ ಯೂನಿಟ್‌ ಗಳು, 2,235 ಕಂಟ್ರೋಲ್‌ ಯೂನಿಟ್‌ಗಳು ಹಾಗೂ 2,422 ವಿವಿಪ್ಯಾಟ್‌ಗಳನ್ನು ಸಿದ್ಧಪಡಿಸಲಾಗಿದೆ. ಜಿಲ್ಲೆಯಲ್ಲಿ 8,70,991 ಪುರುಷರು ಹಾಗೂ 9,10,314 ಮಹಿಳೆಯರು, 84 ಮಂದಿ ತೃತೀಯ ಲಿಂಗಿಗಳ ಸಹಿತ ಒಟ್ಟು 17,81,389 ಮತದಾರರಿದ್ದಾರೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 60 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜಿಲ್ಲೆಯಲ್ಲಿ 10 ಅಂತರ್ ರಾಜ್ಯ, 7 ಅಂತರ್‌ಜಿಲ್ಲಾ , 9 ಸ್ಥಳೀಯ ಚೆಕ್‌ಪೋಸ್ಟ್‌ಗಳಿವೆ. ಅಂತರ್‌ರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಕೇಂದ್ರ ಅರೆಸೇನಾ ಪಡೆ (ಸಿಪಿಎಂಎಫ್), ಸ್ಥಳೀಯ ಪೊಲೀಸ್ ಮತ್ತು ಸರ್ವೇಕ್ಷಣಾ ತಂಡ ಗಳು 24 ತಾಸು ಕಣ್ಗಾವಲು ಇರಿಸಿವೆ.

ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 7 ಮತ್ತು ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ 163 ಸೂಕ್ಷ್ಮ ಮತಗಟ್ಟೆಗಳು, ಗಡಿಭಾಗದ ಮತಗಟ್ಟೆಗಳಲ್ಲಿ ಕೂಡ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್, ಡಿಸಿಪಿ ಅಂಶುಕುಮಾರ್ ಮತ್ತು ದ.ಕ.ಜಿಲ್ಲಾ ಎಸ್ಪಿ ಡಾ. ವಿಕ್ರಮ್ ಅಮಟೆ ಮಂಗಳವಾರ ಮಸ್ಟರಿಂಗ್ ಕೇಂದ್ರಗಳು, ಮತಗಟ್ಟೆಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ‘ಚುನಾವಣೆಗೆ ಸಂಬಂಧಿಸಿದಂತೆ ನಗರದ 60 ರೌಡಿಗಳನ್ನು ಗಡಿಪಾರು ಮಾಡಲಾಗಿದ್ದು, ಅವರ ಮೇಲೆ ನಿಗಾ ವಿಶೇಷ ವಹಿಸಲಾಗಿದೆ. ಇಬ್ಬರ ಮೇಲೆ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಭದ್ರತೆಯ ಸಲುವಾಗಿ ಪ್ರತಿಯೊಂದು ಕ್ಷೇತ್ರದಲ್ಲಿ 17 ಸೆಕ್ಟರ್‌ಗಳನ್ನು ರಚಿಸಲಾಗಿದೆ. ಇದರಲ್ಲಿ ಎಸ್ಸೈ, ಇನ್‌ಸ್ಪೆಕ್ಟರ್, ಎಸಿಪಿ ದರ್ಜೆಯ ಅಧಿಕಾರಿಗಳು ನಿರಂತರ ಗಸ್ತು ನಡೆಸಲಿದ್ದಾರೆ  ಎಂದು ಹೇಳಿದ್ದಾರೆ.

ಕೇರಳ ಗಡಿ ಭಾಗದಲ್ಲಿರುವ 8 ಚೆಕ್‌ಪೋಸ್ಟ್‌ಗಳಲ್ಲದೆ  14 ಒಳರಸ್ತೆಗಳಲ್ಲಿಯೂ ರಾಜ್ಯ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದೆ. ಕಾಸರಗೋಡು ಪೊಲೀಸರೊಂದಿಗೆ ಜಂಟಿ ಗಸ್ತು ನಡೆಸಲಾಗುತ್ತಿದೆ. ಕಾಸರಗೋಡು ಪೊಲೀಸರು ಕೂಡ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮಸ್ಟರಿಂಗ್‌ ಕಾರ್ಯ : ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತಗಟ್ಟೆ ಸಿಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣ ಸಾಮಗ್ರಿ ವಿತರಿಸುವ ಪ್ರಮುಖ ಘಟ್ಟವಾದ ಮಸ್ಟರಿಂಗ್‌ ಕಾರ್ಯ ಮಂಗಳವಾರ ಅಚ್ಚುಕಟ್ಟಾಗಿ ನೆರವೇರಿದ್ದು, ನಿಯೋಜಿತ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು. ಇವರಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್‌ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್‌ ಬ್ಯಾಗ್‌ ಅನ್ನು ಕೌಂಟರ್‌ಗಳ ಮೂಲಕ ವಿತರಿಸಲಾಯಿತು. ಕೇಂದ್ರಗಳ ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಉಟೋಪಹಾರದ ವ್ಯವಸ್ಥೆ ಕೈಗೊಳ್ಳಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯ ಎತ್ತರಕ್ಕೇರಿಸುವೆ: ಇನಾಯತ್ ಅಲಿ

Next Post

ಮಂಗಳೂರು: ಮತ ಚಲಾಯಿಸಿದ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
41
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d