ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವಾಗಲೇ ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಫೇಸ್ಬುಕ್, ಟ್ವಿಟರ್ ಹಾಗೂ ಟೆಲಿಗ್ರಾಂ ಸೇರಿದಂತೆ ಜಾಲತಾಣ ವೇದಿಕೆಯಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡಲಾಗುತ್ತಿದ್ದು, ಈ ಬಗ್ಗೆ ಸ್ವತಃ ಜ್ಯೋತಿ ರೈ ಕೂಡ ಸ್ಪಷ್ಟನೆ ನೀಡಿದ್ದಾರೆ.
ನಟಿ ಜ್ಯೋತಿ ರೈ ಕಿರುತೆರೆ ಲೋಕದ ಧಾರಾವಾಹಿಯಲ್ಲಿ ಸಖತ್ ಹೆಸರು ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಗಮನವನ್ನು ಸಾಮಾಜಿಕ ಜಾಲತಾಣ ಮೂಲಕ ಸೆಳೆದಿದ್ದಾರೆ. ಹೇಗೆಂದರೆ, ಸದಾ ಹಾಟ್ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಇದೀಗ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಖ್ಯಾತ ನಟಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಜ್ಯೋತಿ ರೈ ಹೇಳಿದ್ದೇನು?
ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಅಶ್ಲೀಲ ವಿಡಿಯೋ ಮತ್ತು ಫೋಟೋಗಳು ಬಗ್ಗೆ ನಟಿ ಜ್ಯೋತಿ ರೈ ಮಾಧ್ಯಮಗಳ ಮುಂದೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ಕೆಲ ದಿನಗಳ ಹಿಂದೆಯೇ ಈ ವಿಚಾರವಾಗಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೊಂದು ಸಂದೇಶಗಳನ್ನು ಸ್ವೀಕರಿಸುವ ಮೂಲಕ ನಾನು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ನನ್ನ ಖ್ಯಾತಿ ಮತ್ತು ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿರುವುದರಿಂದ ಈ ಸಾಮಾಜಿಕ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಸರಿಯಾದ ಮತ್ತು ತ್ವರಿತ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ. ಅಲ್ಲದೆ, ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ನಾನು ತುಂಬಾ ಹಾನಿ ಅನುಭವಿಸಬೇಕಾಗುತ್ತದೆ. ನಿಮ್ಮ ಪರಿಶೀಲನೆ ಮತ್ತು ತನಿಖೆಗಾಗಿ ನಾನು ಬಳಕೆದಾರರ ಎಲ್ಲ ಐಡಿಗಳ ಟಿಪ್ಪಣಿಯನ್ನು ಲಗತ್ತಿಸಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ನಂಬರ್‌ಗೆ ಕೆಲ ಮೆಸೇಜ್‌ಗಳು ಕೂಡ ಬಂದಿದ್ದವು ಅದನ್ನು ನೋಡಿ ನನಗೆ ಆಘಾತವಾಗಿದೆ. ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಿ ಎಂದು ಜ್ಯೋತಿ ರೈ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

Discover more from Coastal Times Kannada
Subscribe to get the latest posts sent to your email.
Discussion about this post