• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಯುವತಿ ಸಾವಿಗೆ ಟ್ವಿಸ್ಟ್ – ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು ! ನಂಬಿದ್ದ ಮಹಿಳೆಯಿಂದಲೇ ಮೋಸ

Coastal Times by Coastal Times
June 9, 2023
in ಕರಾವಳಿ
ಉಳ್ಳಾಲ: ಗೃಹ ಪ್ರವೇಶ ನಡೆದ ಐದೇ ದಿನದಲ್ಲಿ ಮನೆಯೊಡತಿ ಆತ್ಮಹತ್ಯೆ
481
VIEWS
WhatsappTelegramShare on FacebookShare on Twitter

ಉಳ್ಳಾಲ,ಜೂ 09 : ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 24 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ.

ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿನಗರ ನಿವಾಸಿ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಯುವತಿ. ದುಬೈನಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಕೆಲ ದಿನಗಳ ಹಿಂದಷ್ಟೇ ಊರಿಗೆ ಆಗಮಿಸಿದ್ದಳು. ದುಬೈ ಕೆಲ¸ದಲ್ಲಿದ್ದ ಸಂದರ್ಭ ಸಂಗೀತಾ ಎಂಬ ಮಹಿಳೆಯ ಪರಿಚಯವಾಗಿದ್ದು, ಇದರಿಂದ ಸಂಗೀತಾ ಪ್ರಸ್ತಾಪಿಸಿದಂತೆ ಕುಂಪಲ ಚಿತ್ರಾಂಜಲಿನಗರದಲ್ಲಿರುವ ಮನೆಯನ್ನು ಖರೀದಿಸುವುದಾಗಿ ವಿಶ್ವಾಸ ನೀಡಿದ್ದರು. ಅದರಂತೆ ಬ್ಯಾಂಕ್ ಸಾಲ ಮರುಪಾವತಿಯಾದ ತಕ್ಷಣ ಅಶ್ವಿನಿ ಹೆಸರಿಗೆ ಮನೆಯನ್ನು ನೋಂದಾವಣಿ ಮಾಡಿಕೊಡುವುದಾಗಿಯೂ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮನೆಗೆಂದು ಬ್ಯಾಂಕಿನಿಂದ ಸಂಗೀತಾ ರೂ. 18 ಲಕ್ಷ ಮರುಪಾವತಿ ಬಾಕಿಯಿತ್ತು. ಅದಕ್ಕಾಗಿ ಅಶ್ವಿನಿಗೆ ಮನೆ ನೀಡುವುದಾಗಿ ಮುಂಚಿತವಾಗಿ ರೂ. 7 ಲಕ್ಷ ನಗದು ಪಡೆದು, ನಂತರ 8 ತಿಂಗಳ ಕಾಲ ರೂ.17,000 ಇಎಂಐ ಆಕೆಯ ಬಳಿ ಪಾವತಿಸಿದ್ದಳು. ಜೂ. 5 ರಂದು ಚಿತ್ರಾಂಜಲಿನಗರದಲ್ಲಿ ಸಂಬಂಧಿಕರ, ಗೆಳೆಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ಗೃಹಪ್ರವೇಶ ನಡೆದಿತ್ತು. ನೆಂಟರು ಮನೆಯಲ್ಲಿರುವ ಸಂದರ್ಭ ಸಂಜೆ ವೇಳೆ ಸಂಗೀತಾ ಸಾಲ ಪಡೆದಿದ್ದ ಬ್ಯಾಂಕ್ ಸಿಬ್ಬಂದಿ ಸೀಝರ್ ಗಳು ಮನೆಗೆ ಆಗಮಿಸಿದ್ದು, ಮನೆಮಂದಿಯನ್ನು ಲೋನ್ ಪಾವತಿಸದೇ ಇದ್ದಲ್ಲಿ ಮನೆಯನ್ನು ಹರಾಜು ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಅಲ್ಲದೆ ಕಳೆದ 1 ವರ್ಷದಿಂದ ಇಎಂಐ ಪಾವತಿಸದೇ ಇರುವುದನ್ನು ತಿಳಿಸಿ ತೆರಳಿದ್ದರು. ನೆಂಟರ ಮುಂದೆ ತನ್ನ ಸಾಧನೆಯನ್ನು ತೋರಿಸುವ ಹಂತದಲ್ಲಿಯೇ ಮರ್ಯಾದೆ ಹೋಯಿತೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಜೂ.8 ರಂದು ಬ್ಯಾಂಕ್ ಗೆ ಬರುವಂತೆ ಅಶ್ವಿನಿಗೆ ಸಿಬ್ಬಂದಿ ತಿಳಿಸಿ ತೆರಳಿದ್ದರು. ಇದರಿಂದ ಇನ್ನಷ್ಟು ಖಿನ್ನತೆಗೆ ಜಾರಿದ್ದ ಅಶ್ವಿನಿ ಇಂದು ಬ್ಯಾಂಕ್ ಕಚೇರಿಗೆ ತೆರಳಬೇಕು ಅನ್ನುವ ಚಿಂತೆಯಿಂದಲೇ ರಾತ್ರಿಯಿಡೀ ಮನೆಯ ಕೋಣೆಯೊಳಗೆ ಕುಳಿತು ಇಂಗ್ಲಿಷ್ ಲಿಪಿಯನ್ನು ಬಳಸಿ ತುಳು ಭಾಷೆಯಲ್ಲೇ 24 ಪುಟಗಳ ಡೆತ್ ನೋಟ್ ಬರೆದಿಟ್ಟು ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆ ನಡೆಸಿಕೊಂಡಿದ್ದಾಳೆ.

ಐ ಲವ್ ಯೂ ನಿಖಿಲ್ ! ತನ್ನ ಸಾವಿಗೆ ತಾನೇ ಕಾರಣ, ಡೆತ್ ನೋಟನ್ನು ಪೊಲೀಸರು ಕೇವಲ ಓದಿದರೆ ಸಾಕು. ತನಿಖೆ ನಡೆಸಬೇಕಿಲ್ಲ ಎಂದು ಬರೆದಿಟ್ಟಿರುವ ಅಶ್ವಿನಿ, ತನಗೆ ಮೋಸ ಮಾಡಿರುವ ಸಂಗೀತಾ ಅನ್ನುವ ಮಹಿಳೆಯ ಬಗ್ಗೆ ಉಲ್ಲೇಖಿಸಿದ್ದಾಳೆ. ತಾನು ಮೊದಲಿನಿಂದಲೂ ಪ್ರೀತಿಸುತ್ತಿದ್ದ ಸೋಮೇಶ್ವರದ ಹುಡುಗ ನಿಖಿಲ್ ಬಗ್ಗೆ ಬರೆದುಕೊಂಡಿದ್ದಾಳೆ. ಐ ಲವ್ ಯೂ ನಿಖಿಲ್, ನಾನು ದೂರ ಹೋಗುತ್ತಿದ್ದೇನೆ ಎಂದು ಬರೆದಿದ್ದು ತನ್ನ ಬಳಿಯಿರುವ ಐಫೋನ್ ಮೊಬೈಲನ್ನು ಆತನಿಗೆ ನೀಡುವಂತೆ ಹೇಳಿದ್ದಾಳೆ.

ಸ್ನೇಹಿತರೇ ಆಕೆಯನ್ನು ಕೊಂದರು ! ಮಗಳ ಸಾವಿನಿಂದ ನೊಂದಿರುವ ತಾಯಿ ದೇವಕಿ, ಮಗಳ ಸಾವಿಗೆ ಆಕೆಯ ಸ್ನೇಹಿತರೇ ಕಾರಣ ಎಂದು ಮಾಧ್ಯಮಗಳೊಂದಿಗೆ ತಿಳಿಸಿದ್ದಾರೆ. ಸೋಮೇಶ್ವರ ನಿಖಿಲ್, ಇಬ್ಬರು ಯುವತಿಯರು ಅಶ್ವಿನಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದರು. ಗೃಹಪ್ರವೇಶ ನಡೆದ ನಂತರವೂ ಮನೆಯ ತಾರಸಿನಲ್ಲಿ ಕುಳಿತು ಸಿಗರೇಟು ಪಾರ್ಟಿ ಮಾಡಿ, ಮಗಳನ್ನೂ ಹಾಳು ಮಾಡುತ್ತಿದ್ದರು. ಸ್ನೇಹಿತರೇ ಆಕೆಗೆ ಮುಖ್ಯವಾಗಿತ್ತು, ತಾಯಿಯ ನೆನಪೇ ಇರಲಿಲ್ಲ. ದುಬೈಯಿಂದ ಬರುವ ವಿಚಾರವೂ ತನಗೆ ಗೊತ್ತಿರಲಿಲ್ಲ. ಸ್ನೇಹಿತರಿಗೆ ತಿಳಿದಿತ್ತು. ಮನೆ ಖರೀದಿಸಿರುವ ವಿಚಾರವೂ ಗಮನಕ್ಕೆ ಬಂದಿರಲಿಲ್ಲ. ಇದೀಗ ಮನೆಯ ಸಾಲವೇ ಆಕೆಯನ್ನು ಮುಗಿಸಿದ್ದು, ತನ್ನನ್ನು ಅನಾಥಳನ್ನಾಗಿ ಮಾಡಿ ಹೋಗಿದ್ದಾಳೆ ಎಂದಿದ್ದಾರೆ.

ಡೆತ್ ನೋಟಲ್ಲಿ ಇರುವಂತೆ ಯಾರ ವಿರುದ್ಧವೂ ಕ್ರಮಕೈಗೊಳ್ಳುವ ಹಾಗಿಲ್ಲ. ತಾಯಿ ದೇವಕಿ ಒಂದು ವೇಳೆ ವಂಚಿಸಿದ ಸಂಗೀತಾ ಹಾಗೂ ಗೃಹಪ್ರವೇಶದಂದೇ ಮನೆಗೆ ಬಂದಿದ್ದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ನೀಡಿದಲ್ಲಿ ಆತ್ಮಹತ್ಯೆ ಪ್ರಚೋದನೆ ದಾಖಲಿಸಬಹುದು. ಈವರೆಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ ಅನ್ನುವುದನ್ನು ಉಳ್ಳಾಲ ಠಾಣಾಧಿಕಾರಿಗಳು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಲಿವ್-ಇನ್ ಸಂಗಾತಿಯ ಭೀಕರ ಕೊಲೆ ; ಶವ ಕತ್ತರಿಸಿ ಕುಕ್ಕರ್​ನಲ್ಲಿ ಬೇಯಿಸಿದ ಕಿರಾತಕ, ಸಿಕ್ಕಿದ್ದು ಕಾಲುಗಳಷ್ಟೇ

Next Post

ಮಂಗಳೂರು: ಎಂಡಿಎಂಎ ಸಿಂಥೆಟಿಕ್ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Related Posts

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಕರಾವಳಿ

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ
ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
31
Next Post
ಮಂಗಳೂರು: ಎಂಡಿಎಂಎ ಸಿಂಥೆಟಿಕ್ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು: ಎಂಡಿಎಂಎ ಸಿಂಥೆಟಿಕ್ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
58
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d