ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಮುಂದುವರೆಸಲಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಭಾನುವಾರ (ಜೂನ್ 8ರಂದು) ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ತನಿಖೆಯನ್ನು ಎನ್ಐಎ ಅಧಿಕಾರಿಗಳು ಕೈಗೆತ್ತಿಕೊಳ್ಳಲಿದ್ದಾರೆ.
ಮೇ 1ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸುಹಾಸ್ ಶೆಟ್ಟಿ ಅವರನ್ನು ಕಿನ್ನಿಪದವು ಜಂಕ್ಷನ್ ಬಳಿ 6 ಮಂದಿಯ ತಂಡವೊಂದು ಬೆನ್ನಟ್ಟಿ ಬರ್ಬರವಾಗಿ ಹತ್ಯೆಗೈದಿತ್ತು. ತನಿಖೆ ಕೈಗೊಂಡ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಗಳಿಂದ ಹಣಕಾಸಿನ ನೆರವು ಸಿಕ್ಕಿದೆ. ರಾಜ್ಯದ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.
ಪ್ರಕರಣದ ತನಿಖೆ NIAಗೆ ವಹಿಸುವಂತೆ ಮನವಿ ಮಾಡಿದ್ದ ಬಿಜೆಪಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಪ್ರಕರಣದ ತನಿಖೆಯನ್ನು NIA ಗೆ ನೀಡುವಂತೆ ಸುಹಾಸ್ ಶೆಟ್ಡಿ ಪೋಷಕರು ಸರ್ಕಾರಕ್ಕೆ ಒತ್ತಾಯಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post