• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀನಗರ: ಅಮರನಾಥ ಗುಹೆಯ ಬಳಿ ಮೇಘಸ್ಫೋಟ: 15 ಮಂದಿ ಸಾವು

Coastal Times by Coastal Times
July 9, 2022
in ರಾಷ್ಟ್ರೀಯ ಸುದ್ದಿ
ಶ್ರೀನಗರ: ಅಮರನಾಥ ಗುಹೆಯ ಬಳಿ ಮೇಘಸ್ಫೋಟ: 15 ಮಂದಿ ಸಾವು
102
VIEWS
WhatsappTelegramShare on FacebookShare on Twitter

ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥದಲ್ಲಿ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಮೇಘ ಸ್ಫೋಟವಾಗಿದ್ದು, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 25ಕ್ಕೂ ಹೆಚ್ಚು ಡೇರೆಗಳು ನಾಶವಾಗಿವೆ. ಮೂರು ಸಾಮೂಹಿಕ ಭೋಜನಗೃಹಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಘಸ್ಫೋಟದ ಬಳಿಕ ಭಾರಿ ಮಳೆ ಸುರಿದಿದೆ. ಮಳೆಯಿಂದಾಗಿ ಪ್ರವಾಹದಂತಹ ಸ್ಥಿತಿ ನಿರ್ಮಾಣವಾಗಿದೆ. ವೇಗವಾಗಿ ನುಗ್ಗಿದ ನೀರಿನಿಂದಾಗಿ ಡೇರೆಗಳು ಕೊಚ್ಚಿ ಹೋದವು.  ಪೊಲೀಸ್‌, ಸೇನೆ ಮತ್ತು ಇಂಡೊ–ಟಿಬೆಟ್‌ ಗಡಿ ಪೊಲೀಸ್‌ (ಐಟಿಬಿಪಿ) ಪಡೆಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ. ಜಮ್ಮು–ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರ ಜತೆಗೂ ಪ್ರಧಾನಿ ಮಾತನಾಡಿದ್ದಾರೆ.

Anguished by the cloud burst near Shree Amarnath cave. Condolences to the bereaved families. Spoke to @manojsinha_ Ji and took stock of the situation. Rescue and relief operations are underway. All possible assistance is being provided to the affected.

— Narendra Modi (@narendramodi) July 8, 2022

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಮನೋಜ್ ಸಿನ್ಹಾ ಅವರ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌), ಕೇಂದ್ರ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಶಾ ಅವರು ಟ್ವೀಟ್‌ ಮಾಡಿದ್ದಾರೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಯಾತ್ರಿಕರಿಗೆ ಎಲ್ಲ ನೆರವು ನೀಡಲಾಗುವುದು ಶಾ ಹೇಳಿದ್ದಾರೆ.

ತೀರ್ಥಯಾತ್ರಿಕರ 10 ಮೃತದೇಹಗಳು ದೊರೆತಿವೆ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಹೆಲಿಕಾಪ್ಟರ್‌ಗಳ ಮೂಲಕ ಚಿಕಿತ್ಸೆಗೆ ಕರೆತರಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಾಶ್ಮೀರ ಪೊಲೀಸ್‌ ಮಹಾ ನಿರೀಕ್ಷಕ ವಿಜಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.  ಅಮರನಾಥ ಗುಹೆಯ ಮೇಲ್ಭಾಗ ಮತ್ತು ಬದಿಗಳಿಂದ ನೀರು ನುಗ್ಗಿದೆ ಎಂದು ಐಟಿಬಿಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನೆಟ್​ಫ್ಲಿಕ್ಸ್ ತನ್ನ 221 ಲಕ್ಷ ಬಳಕೆದಾರರಿಗೆ ‘ಸ್ಪೇಷಲ್​ ಆಡಿಯೋ’ ಪರಿಚಯಿಸಿದೆ.

Next Post

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತು ಮಾರುತ್ತಿದ್ದ 12 ಕೇರಳ ವಿದ್ಯಾರ್ಥಿಗಳ ಬಂಧನ

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
12
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
98
Next Post
ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತು ಮಾರುತ್ತಿದ್ದ 12 ಕೇರಳ ವಿದ್ಯಾರ್ಥಿಗಳ ಬಂಧನ

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತು ಮಾರುತ್ತಿದ್ದ 12 ಕೇರಳ ವಿದ್ಯಾರ್ಥಿಗಳ ಬಂಧನ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d