• About us
  • Contact us
  • Disclaimer
Thursday, October 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

Coastal Times by Coastal Times
July 9, 2025
in ಕರಾವಳಿ
ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ
202
VIEWS
WhatsappTelegramShare on FacebookShare on Twitter

ತಿರುವನಂತಪುರಂ: ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಾಲಕ್ಕಾಡ್ನ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16 ರಂದು ಗಲ್ಲಿಗೇರಿಸಲಾಗುವುದು ಎಂದು ನಿಮಿಷಾ ಪ್ರಿಯಾ ಅವರ ತಾಯಿ ಪ್ರೇಮಾ ಕುಮಾರಿ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ಮಾನವ ಹಕ್ಕುಗಳ ಕಾರ್ಯಕರ್ತ ಸಂಧಾನಕಾರ ಸ್ಯಾಮ್ಯುಯೆಲ್ ಜೆರೋಮ್ ಹೇಳಿದ್ದಾರೆ.

ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವರನ್ನು ಕೊಲೆ  ಮಾಡಿದ ಆರೋಪದ ಮೇಲೆ ಪ್ರಿಯಾ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಯೆಮೆನ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿರುವ ಕ್ಲಿನಿಕ್ ಅನ್ನು ತೆರೆಯಲು ಅವರಿಬ್ಬರೂ ಪಾರ್ಟನರ್ ಆಗಿದ್ದರು. ತಲಾಲ್ ಅವರ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ ನಿಮಿಷಾ ಪ್ರಿಯಾ ತಲಾಲ್ ಅವರಿಗೆ ಡ್ರಗ್ ನೀಡಿ ಕೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಅವರು ಮಾದಕವಸ್ತುವಿನ ಅತಿಯಾದ ಸೇವನೆಯಿಂದ ಸಾವನ್ನಪ್ಪಿದ್ದರು.

ತಲಾಲ್ ಸಾವಿನ ನಂತರ, ನಿಮಿಷಾ ಪ್ರಿಯಾ ಮತ್ತು ಅವರ ಯೆಮೆನ್ ಸಹೋದ್ಯೋಗಿ ಹನಾನ್ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ವಿಲೇವಾರಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ನಿಮಿಷಾಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ತೆರಳಿದರು. ಅವರು ತಮ್ಮ ದೈನಂದಿನ ಕೂಲಿ ಕಾರ್ಮಿಕರಾದ ಪೋಷಕರಿಗೆ ಆರ್ಥಿಕ ಸಹಾಯ ನೀಡಲು ಯೆಮೆನ್​ಗೆ ತೆರಳಿದ್ದರು. ಆರಂಭದಲ್ಲಿ ಅವರು ಯೆಮೆನ್‌ನ ಹಲವಾರು ಆಸ್ಪತ್ರೆಗಳಲ್ಲಿ ಹಗಲು, ರಾತ್ರಿ ಕೆಲಸ ಮಾಡಿದರು. ನಂತರ ತಮ್ಮದೇ ಆದ ಕ್ಲಿನಿಕ್ ತೆರೆಯುವ ನಿರ್ಧಾರಕ್ಕೆ ಬಂದರು. ಯೆಮೆನ್‌ನಲ್ಲಿ ತನ್ನ ಕ್ಲಿನಿಕ್ ಅನ್ನು ಪ್ರಾರಂಭಿಸಲು ಸಹಾಯ ಮಾಡುವುದಾಗಿ ತಲಾಲ್ 2014ರಲ್ಲಿ ಭರವಸೆ ನೀಡಿದಾಗ ಆಕೆ ತಲಾಲ್ ಅಬ್ದೋ ಮಹ್ದಿ ಅವರ ಜೊತೆ ಒಡನಾಟ ಬೆಳೆಸಿಕೊಂಡರು. ಸ್ವಂತ ಕ್ಲಿನಿಕ್ ತೆರೆಯುವುದು ಅವರ ಬಹುದಿನಗಳ ಆಸೆಯಾಗಿತ್ತು.

ಯೆಮೆನ್ ವ್ಯವಹಾರ ಕಾನೂನಿನ ಪ್ರಕಾರ, ಮಧ್ಯಪ್ರಾಚ್ಯ ದೇಶದಲ್ಲಿ ವ್ಯವಹಾರವನ್ನು ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಕಾನೂನಿನ ಪ್ರಕಾರ, ನಿಮಿಷಾ ತಲಾಲ್ ಜೊತೆ ಕ್ಲಿನಿಕ್ ತೆರೆಯಲು ಷರತ್ತುಗಳನ್ನು ಮಾಡಿಕೊಂಡು, ಒಪ್ಪಂದ ಮಾಡಿಕೊಂಡರು. ನಿಮಿಷಾ 2015ರಲ್ಲಿ ಸನಾದಲ್ಲಿ ತಲಾಲ್ ಜೊತೆ ತನ್ನ ಕ್ಲಿನಿಕ್ ಅನ್ನು ಪ್ರಾರಂಭಿಸಿದರು. ಆದರೆ ಶೀಘ್ರದಲ್ಲೇ ಅವರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು. ಹೀಗಾಗಿ, ತಲಾಲ್ ತನಗೆ ದೌರ್ಜನ್ಯ ಎಸಗಿ, ಚಿತ್ರಹಿಂಸೆ ನೀಡಿದ್ದಾನೆ ಎಂದು ಆಕೆ ಆರೋಪಿಸಿದ್ದರು. ಇದೇ ಕೋಪದಲ್ಲಿ ಆಕೆ ಯೆಮೆನ್ ಬಿಟ್ಟು ಹೋಗದಂತೆ ನೋಡಿಕೊಳ್ಳಲು ಅವನು ಅವಳ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ.

ಬಳಿಕ ತಲಾಲ್ ವಿರುದ್ಧ ನಿಮಿಷಾ ಪೊಲೀಸ್ ದೂರು ದಾಖಲಿಸಿದರು. ಇದರಿಂದ 2016ರಲ್ಲಿ ಆತನನ್ನು ಬಂಧಿಸಲಾಯಿತು. ಅದಾದ ಸ್ವಲ್ಪ ಸಮಯದ ನಂತರ ಅವನನ್ನು ಬಿಡುಗಡೆ ಮಾಡಲಾಯಿತು. ಹೊರಗೆ ಬಂದ ತಲಾಲ್ ಮತ್ತು ನಿಮಿಷಾ ನಡುವೆ ಮತ್ತೆ ಜಗಳ ಹೆಚ್ಚಾಗಿತ್ತು. 2017ರಲ್ಲಿ ಇಬ್ಬರೂ ಜಗಳವಾಡಿದಾಗ ನಿಮಿಷಾ ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯಲು ಮತ್ತು ಭಾರತಕ್ಕೆ ಹಿಂತಿರುಗಲು ಸ್ಥಳೀಯ ಜೈಲು ವಾರ್ಡನ್‌ನ ಸಹಾಯವನ್ನು ಕೋರಿದರು. ಅವರು ತಲಾಲ್​ನನ್ನು ಅಶಕ್ತಗೊಳಿಸಲು ನಿದ್ರಾಜನಕಗಳನ್ನು ಬಳಸಲು ಸೂಚಿಸಿದರು. ಅವರ ಸಲಹೆಯಂತೆ ನಿಮಿಷಾ ತಲಾಲ್ ಬಳಿಯಿದ್ದ ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ ಅವನಿಗೆ ಅಮಲಿನ ಡ್ರಗ್ ಚುಚ್ಚಿದಳು. ಆದರೆ, ಅದು ಓವರ್ ಡೋಸ್ ಆಗಿ ಆತ ಸಾವನ್ನಪ್ಪಿದನು. ಇದರಿಂದ ಆಕೆಯನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಲಾಯಿತು.

ಆಕೆಯ ತಾಯಿ ಪ್ರೇಮಾ ಕುಮಾರಿ ಮರಣದಂಡನೆಯ ವಿರುದ್ಧ ಯೆಮಿನಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ 2023ರಲ್ಲಿ ಮೇಲ್ಮನವಿಯನ್ನು ತಿರಸ್ಕರಿಸಲಾಯಿತು. 2017ರಲ್ಲಿ ಯೆಮೆನ್ ವಿಚಾರಣಾ ನ್ಯಾಯಾಲಯವು ನಿಮಿಷಾ ಪ್ರಿಯಾಗೆ ಮರಣದಂಡನೆ ವಿಧಿಸಿತು. ನಂತರ 2023ರಲ್ಲಿ ಯೆಮೆನ್ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಎತ್ತಿಹಿಡಿಯಿತು. ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಕೂಡ ಆಕೆಯ ಮರಣದಂಡನೆಯನ್ನು ಅನುಮೋದಿಸಿದ್ದರು. ಹೀಗಾಗಿ, ಆಕೆ ಜುಲೈ 16ರಂದು ಗಲ್ಲಿಗೇರಲಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

Next Post

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ; ಮೂವರ ಬಂಧನ

Related Posts

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!
ಕರಾವಳಿ

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
123
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ
ಕರಾವಳಿ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
34
Next Post
ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ; ಮೂವರ ಬಂಧನ

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ; ಮೂವರ ಬಂಧನ

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
116
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
123
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d