ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬೈಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯ ಮಹಾಸಭೆಯಲ್ಲಿ ಪಾಲ್ಗೊಂಡು ಮಂಗಳೂರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಡೊಮೆಸ್ಟಿಕ್ ಬ್ಯಾಗೇಜ್ ಬೆಲ್ಟ್ ಬಳಿ ಎದೆನೋವಿನಿಂದ ಕುಸಿದ ಅವರನ್ನು ತಕ್ಷಣ ಆ್ಯಂಬುಲೆನ್ಸ್ ಮೂಲಕ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿಯವರಾದ ಜಯರಾಮ ಭಟ್, ನಾಲ್ಕೂವರೆ ದಶಕಗಳಿಗೂ ಮೀರಿದ ಸುದೀರ್ಘ ಜೀವನ ವನ್ನು ಬ್ಯಾಂಕಿಂಗ್ ವೃತ್ತಿಯಲ್ಲಿ ಸವೆಸಿ, ನಿವೃತ್ತರಾಗಿದ್ದರು. ಅವರಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ.
ಮೂಲತಃ ಪೊಳಲಿಯವರಾದ ಭಟ್ ಅವರು 1972 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಸಿಯನ್ನು ಪ್ರಥಮ ರ‍್ಯಾಂಕ್‌ನೊಂದಿಗೆ ಪೂರ್ಣಗೊಳಿಸಿದರು. CAIIB ಪರೀಕ್ಷೆಯಲ್ಲಿ ಯಶಸ್ವಿಯಾದ ನಂತರ, ಅವರು 1972 ರಲ್ಲಿ ಮೂರು ತಿಂಗಳ ಕಾಲ ಮುಲ್ಕಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ಬಳಿಕ 1973 ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್ ಲಿಮಿಟೆಡ್‌ಗೆ ಸೇರಿ ಬ್ಯಾಂಕಿಂಗ್ ಕ್ಶೇತ್ರದಲ್ಲಿ ಅವರ ವೃತ್ತಿಜೀವನ ಪ್ರಾರಂಭಿಸಿದರು
1976 ರಲ್ಲಿ ಅವರು ಶಾಖೆಯ ವ್ಯವಸ್ಥಾಪಕರಾಗಿ ಭಡ್ತಿ ಪಡೆದು ಇದಾದ ಬಳಿಕ 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿದರು. ಅವರು 1993 ರಲ್ಲಿ ಬ್ಯಾಂಕಿನ ಮುಖ್ಯ ಕಛೇರಿಯಲ್ಲಿ ಮುಖ್ಯ ಅಕೌಂಟೆಂಟ್ ಆಗಿ ಬಡ್ತಿ ಪಡೆದರು. ನಂತರ ಸಹಾಯಕ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡರು ಮತ್ತು 2005 ರಲ್ಲಿ ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗೆ ಏರಿದ್ದರು
Discover more from Coastal Times Kannada
Subscribe to get the latest posts sent to your email.
Discussion about this post