• About us
  • Contact us
  • Disclaimer
Monday, April 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಕಪಾಟಿನಲ್ಲಿರಿಸಿದ್ದ 75 ಪವನ್‌ ಚಿನ್ನಾಭರಣ ಕಳವು; ಪತಿಯ ವಿರುದ್ಧ ದೂರು ನೀಡಿದ ಪತ್ನಿ

Coastal Times by Coastal Times
August 9, 2023
in ಕ್ರೈಮ್ ನ್ಯೂಸ್
ಮಂಗಳೂರು| ಕಪಾಟಿನಲ್ಲಿರಿಸಿದ್ದ 75 ಪವನ್‌ ಚಿನ್ನಾಭರಣ ಕಳವು; ಪತಿಯ ವಿರುದ್ಧ ದೂರು ನೀಡಿದ ಪತ್ನಿ
153
VIEWS
WhatsappTelegramShare on FacebookShare on Twitter

ಮಂಗಳೂರು: ತನ್ನ ಪತಿ 75 ಪವನ್‌ ಚಿನ್ನ ಕಳವು ಮಾಡಿರುವ ಬಗ್ಗೆ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. ರೆನಿಶಾ ನೊರೊನ್ಹಾ ದೂರು ನೀಡಿದವರು. ಆಕೆಯ ಪತಿ ಮೊಹಮ್ಮದ್‌ ಇಲಿಯಾಸ್‌ ಆರೋಪಿ. ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧವೂ ದೂರು ದಾಖಲಾಗಿದೆ.

ತಾನು ಪತಿ ಮೊಹಮ್ಮದ್‌ ಇಲಿಯಾಸ್‌ ಮತ್ತು ಮಗನೊಂದಿಗೆ ಮಂಗಳೂರು ಕೆಪಿಟಿ ವ್ಯಾಸನಗರದ ಫ್ಲ್ಯಾಟ್‌ನಲ್ಲಿ ವಾಸವಿದ್ದೆವು. ಮದುವೆ ಸಮಯದಲ್ಲಿ ತಾಯಿ ಮನೆಯವರು ನೀಡಿದ 25 ಪವನ್‌, ತಾನು ದುಡಿದು ಮಾಡಿದ 5 ಪವನ್‌, ತಾಯಿ ಮನೆಯವರು ಉಡುಗೊರೆಯಾಗಿ ನೀಡಿದ 20 ಪವನ್‌, ಮದುವೆ ಸಮಯದಲ್ಲಿ ಪತಿಯ ಮನೆಯವರು ಉಡುಗೊರೆಯಾಗಿ ನೀಡಿದ 25 ಪವನ್‌ ಸೇರಿದಂತೆ ಒಟ್ಟು 75 ಪವನ್‌ ಚಿನ್ನವನ್ನು ಲಾಕರ್‌ನಲ್ಲಿಟ್ಟಿದ್ದೆ. ಇದು ತನಗೆ ಮತ್ತು ಪತಿ ಇಲಿಯಾಸ್‌ನಿಗೆ ಮಾತ್ರ ತಿಳಿದಿತ್ತು.

ಪತಿ ಮತ್ತು ಪತ್ನಿ ನಡುವೆ ಕೆಲವು ತಿಂಗಳಿನಿಂದ ವಿರಸ ಉಂಟಾಗಿದ್ದು ತಾಯಿ ಮನೆಯಲ್ಲಿ ವಾಸವಿದ್ದೆ. ವಾರಕ್ಕೊಮ್ಮೆ ಫ್ಲ್ಯಾಟ್‌ಗೆ ಬಂದು ಹೋಗುತ್ತಿದ್ದೆ.ಸುಮಾರು ಒಂದು ತಿಂಗಳ ಅನಂತರ ಫ್ಲ್ಯಾಟ್‌ಗೆ ಹೋಗಿ ವಾಚ್‌ಮೆನ್‌ ಬಳಿ ವಿಚಾರಿಸಿದಾಗ ಪತಿ ಫ್ಲ್ಯಾಟ್‌ಗೆ ಬಾರದೆ ಒಂದು ವಾರವಾಗಿದೆ ಎಂದು ತಿಳಿಸಿದ್ದರು. ಇದರಿಂದ ಅನುಮಾನಗೊಂಡು ಬಂಗಾರ ಇಟ್ಟ ಲಾಕರ್‌ನಲ್ಲಿ ನೋಡಿದಾಗ ಲಾಕರ್‌ ಸಮೇತ ಚಿನ್ನ ಇರಲಿಲ್ಲ. ಪತಿಗೆ ಪದೇ ಪದೇ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ.

ಮೂರು ದಿನಗಳ ಅನಂತರ ಕರೆ ಸ್ವೀಕರಿಸಿ “ನಾನು ಲಾಕರ್‌ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿದ್ದೇನೆ. ನಿನಗೆ ಏನು ಮಾಡಲಾಗುತ್ತದೆ ಅದನ್ನು ಮಾಡು’ ಎಂದಿದ್ದಾನೆ. ಅಲ್ಲದೆ ಚಿನ್ನವನ್ನು ಬ್ಯಾಂಕ್‌ನಲ್ಲಿಟ್ಟು ಹಣ ಪಡೆದುಕೊಂಡಿದ್ದು ಅದಕ್ಕೆ ಬಡ್ಡಿ ಕಟ್ಟಲು ಆಗದೆ ಪ್ರಭಾಕರ್‌ ಎಂಬವರಿಗೆ ಮೂರು ತಿಂಗಳ ಮಟ್ಟಿಗೆ ಬಡ್ಡಿ ಕಟ್ಟಲು ಅನುಮತಿ ನೀಡಿದ್ದೆ. ಅಡವಿಟ್ಟ ಚಿನ್ನದಲ್ಲಿ ಪ್ರಭಾಕರ ಅವರು ಮೂರು ತಿಂಗಳಾಗುವ ಮೊದಲು ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿದ್ದಾರೆ ಎಂದು ತಿಳಿಸಿದ್ದಾನೆ. ಹಾಗಾಗಿ ಇಲಿಯಾಸ್‌ ಮತ್ತು ಪ್ರಭಾಕರನ ಮೇಲೆ ಸೂಕ್ತ ಕ್ರಮ ಜರಗಿಸಿ ಚಿನ್ನವನ್ನು ಹಿಂದಿರುಗಿಸಬೇಕು ಎಂದು ರೆನಿಶಾ ನೊರೊನ್ಹಾ ಅವರು ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿಗೆ ಆಗಮಿಸಿದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ, ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ

Next Post

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಜಯರಾಮ ಭಟ್ ಹೃದಯಾಘಾತಕ್ಕೀಡಾಗಿ ನಿಧನ

Related Posts

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
105
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ
ಕ್ರೈಮ್ ನ್ಯೂಸ್

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
64
Next Post
ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಜಯರಾಮ ಭಟ್ ಹೃದಯಾಘಾತಕ್ಕೀಡಾಗಿ ನಿಧನ

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಜಯರಾಮ ಭಟ್ ಹೃದಯಾಘಾತಕ್ಕೀಡಾಗಿ ನಿಧನ

Discussion about this post

Recent News

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
105
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d