ಮಂಗಳೂರು, ಸೆ.8 : 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿ ಆಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
1998 ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮುಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆ ಅ. ಕ್ರ.𝟬𝟲/𝟭𝟵𝟵𝟵 ಕಲಂ 143, 147, 148, 436, 427 r/w 149 IPC ಪ್ರಕರಣದಲ್ಲಿ ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಎಂಬವರು ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದರು. ಆಗಿನ ಮುಲ್ಕಿ ಠಾಣೆಯ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯದ ವಿಚಾರಣೆಗೂ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಮೂಡುಬಿದ್ರೆ ಹಿರಿಯ CJ & JMFC ನ್ಯಾಯಾಲಯ CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 𝟮𝟲 ವರ್ಷಗಳಿಂದ ತಲೆಮರೆಸಿಕೊಂಡಿರುವ LPC warrant ಆಸಾಮಿ ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಲೀಲಾಧರ್ (52) ಎಂಬವನನ್ನು ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.
ಈ ಪ್ರಕರಣದಲ್ಲಿ ದುಬೈಗೆ ಪರಾರಿಯಾಗಿದ್ದ ಇನ್ನೋರ್ವ ಆರೋಪಿ ಚಂದ್ರಹಾಸ್ ಕೇಶವ ಶೆಟ್ಟಿ ಯಾನೆ ಚಂದ್ರ ಎಂಬಾತನನ್ನು ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಇವರ ಇಬ್ಬರ ವಿರುದ್ದ ಪ್ರತ್ಯೇಕವಾಗಿ 88/2025 ಮತ್ತು 94/2025 ಕಲಂ 208, 209 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post