ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದಂತಹ ಡಾ. ಬಿ. ವಸಂತಶೆಟ್ಟಿಯವರ ಸಂಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕ್ರಾಸ್‌ಲ್ಯಾಂಡ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಪ್ರೊ. ಗುರುಮೂರ್ತಿ ಇವರು ಶಾಸನಗಳ ಅಧ್ಯಯನವು ಇತಿಹಾಸದ ಹಲವು ಆಯಾಮಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂಬುವುದಾಗಿ ಅಭಿಪ್ರಾಯ ಪಟ್ಟರು. ಉಬ್ಬುಶಿಲ್ಪಗಳು ಮತ್ತು ಶಾಸನಗಳ ಪ್ರಕಾರಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಬಿ. ಜಗದೀಶ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು ಪೂರ್ಣಪ್ರಜ್ಞ ಕಾಲೇಜು ಉಡುಪಿ ಹಾಗೂ ಪ್ರಸ್ತುತ ಆಡಳಿತಾಧಿಕಾರಿಗಳು ರಾಷ್ಟçಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಎಂ.ಜಿ.ಎಂ. ಕಾಲೇಜು, ಉಡುಪಿ ಇವರು ಡಾ. ಬಿ. ವಸಂತ ಶೆಟ್ಟಿ ಸಂಸ್ಮರಣಾರ್ಥ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮು ಎಲ್ ವಹಿಸಿದ್ದರು. ಹಿರಿಯ ವಿದ್ವಾಂಸರಾದ ಡಾ. ಪಾದೇಕಲ್ಲು ವಿಷ್ಣುಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಇತಿಹಾಸವನ್ನು ಅರ್ಥೈಸಿಕೊಳ್ಳುವ ಬಗೆ ಇತಿಹಾಸದ ಪ್ರಾಮುಖ್ಯತೆಯನ್ನು ವಿವರಿಸಿದರು.
ಡಾ. ರಮೇಶ್ ಟಿ.ಎಸ್.ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಶೆಟ್ಟಿ ಸ್ವಾಗತಿಸಿದರು, ವಿದ್ಯಾರ್ಥಿನಿ ಅನುಷಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಶೆರೋನ್ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಶ್ರೀಮತಿ ಶಿಲ್ಪಲತಾ ವಂದನಾರ್ಪಣೆಗೈದರು.
Discover more from Coastal Times Kannada
Subscribe to get the latest posts sent to your email.
Discussion about this post