• About us
  • Contact us
  • Disclaimer
Friday, October 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

Coastal Times by Coastal Times
October 9, 2026
in ಕರಾವಳಿ
ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​
26
VIEWS
WhatsappTelegramShare on FacebookShare on Twitter

ಮಂಗಳೂರು, ಅ.8: ನವರಾತ್ರಿ ಭಾರತೀಯ ಸನಾತನ ಸಂಸ್ಕೃತಿಯ ಪವಿತ್ರವಾದ ಹಬ್ಬವಾಗಿದ್ದು, ಈ ದಿನಗಳಲ್ಲಿ ನಡೆಯುವ ‘ದಾಂಡಿಯಾ/ಗರ್ಬಾ’ ನೃತ್ಯವು ಹಿಂದೂ ಧರ್ಮೀಯರು ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸುವ ಧಾರ್ಮಿಕ ಆಚರಣೆಯಾಗಿದೆ. ಆದರೆ, ಮಂಗಳೂರು ನಗರದ ಪಬ್‌ಗಳು, ಪಾರ್ಟಿ ಹಾಲ್‌ಗಳು ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ  ‘ದಾಂಡಿಯಾ’ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಡಿಜೆ ಮ್ಯೂಸಿಕ್ ಹಾಗೂ ಅಶ್ಲೀಲ ಪಾರ್ಟಿಗಳನ್ನು ಆಯೋಜಿಸುತ್ತಿದ್ದು ಇದಕ್ಕೆಲ್ಲ ಪೊಲೀಸ್ ಇಲಾಖೆ ಅವಕಾಶ ನೀಡಬಾರದೆಂದು ಬಜರಂಗದಳ ಮತ್ತು ದುರ್ಗಾವಾಹಿನಿ ಆಗ್ರಹಿಸಿದೆ.‌

ಈ ಕುರಿತು ಪೋಸ್ಟರ್‌ಗಳು ಸಾರ್ವಜನಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇಂತಹ ಪಾರ್ಟಿಗಳ ಮುಖಾಂತರ ಮದ್ಯ ಹಾಗೂ ಮಾದಕ ದ್ರವ್ಯಗಳ ಸೇವನೆಗೆ ಆಸ್ಪದ ಮಾಡಲಾಗುತ್ತಿದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ದಾಂಡಿಯಾದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಆಯೋಜಿಸುತ್ತಿರುವ ಈ ಕಾರ್ಯಕ್ರಮಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ.

ದಾಂಡಿಯಾ ಕಾರ್ಯಕ್ರಮದ ಮುಖಾಂತರ ಯುವಜನತೆಯನ್ನು ದುರ್ಮಾರ್ಗಕ್ಕೆ ಎಳೆಯುವ  ಇಂತಹ ಯಾವುದೇ ಅಸಭ್ಯ ಪಾರ್ಟಿ, ಫ್ಯಾಷನ್ ಶೋ ಅಶ್ಲೀಲ ಕಾರ್ಯಕ್ರಮಗಳಿಗೆ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು  ಪೊಲೀಸ್ ಉಪ ಆಯುಕ್ತರನ್ನು ಭೇಟಿಯಾಗಿ ಮನವಿ ನೀಡಲಾಗಿದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಘಟಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗಳಿಗೂ ದೂರು ನೀಡಲಾಗಿದ್ದು ಇದಕ್ಕೆಲ್ಲ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದಾಗಿ ಪ್ರಾಂತ ಮಾತೃಶಕ್ತಿ ಪ್ರಮುಖ್ ಶ್ರೀಮತಿ ಸುರೇಖಾ ರಾಜ್, ಜಿಲ್ಲಾ ಬಜರಂಗದಳ ಸಂಯೋಜಕ್ ಪ್ರೀತಮ್ ಕಾಟಿಪಳ್ಳ ವಿನಂತಿಸಿದ್ದಾರೆ.

ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು: ಕಮಿಷನರ್ : ಹಿಂದುತ್ವ ಸಂಘಟನೆಗಳ ಈ ಮನವಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಅತ್ಯಂತ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಯಾವುದಾದರೂ ಕಾರ್ಯಕ್ರಮದಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆಯುತ್ತಿದ್ದರೆ ಅದನ್ನು ತಡೆಯಲು ಸಾರ್ವಜನಿಕರು ಅಥವಾ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಬೇಕು. ಅದನ್ನು ತಡೆಯುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತದೆ. ತಮ್ಮ ವೈಯಕ್ತಿಕ ದೃಷ್ಟಿಕೋನದಲ್ಲಿ ಯಾವುದಾದರೂ ಚಟುವಟಿಕೆಯನ್ನು ‘ಅನೈತಿಕ’ ಎಂದು ಪರಿಗಣಿಸಿ, ಕಾನೂನುಬದ್ಧ ಅನುಮತಿ ಪಡೆದಿರುವ ಕಾರ್ಯಕ್ರಮಗಳನ್ನು ಯಾರಾದರೂ ತಾವೇ ನಿಲ್ಲಿಸಲು ಮುಂದಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಸಂಘಟಕರು ಅಥವಾ ಆಯೋಜಕರು ದೂರು ನೀಡಿದರೆ, ಅಂತಹವರ ವಿರುದ್ಧ ಮಾಡುವ ಕೃತ್ಯದ ತೀವ್ರತೆಗೆ ಅನುಗುಣವಾಗಿ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಗಂಭೀರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

Related Posts

ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ
ಕರಾವಳಿ

ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ

October 7, 2026
25
ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ
ಕರಾವಳಿ

ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ

October 6, 2026
51

Discussion about this post

Recent News

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
26
ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

October 8, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

ದಾಂಡಿಯಾ ಹೆಸರಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪಾರ್ಟಿಗೆ ಅನುಮತಿ ನೀಡದಂತೆ ಬಜರಂಗದಳ ಆಗ್ರಹ: ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು ಎಂದ ಕಮಿಷನರ್​

October 9, 2026
ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

October 8, 2026
ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

October 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d