ತಿರುವನಂತಪುರಂ: 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲ್ಯುಯೆನ್ಸರ್ನಿಶಾ ರಾಫೆಲ್ ವಿರುದ್ಧ ತ್ರಿಶೂರ್ ಪಶ್ಚಿಮ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಬಲಿಪಶು ಬಾಲಕನನ್ನು ವೈದ್ಯಕೀಯ-ಕಾನೂನು ಪರೀಕ್ಷೆಗಾಗಿ ತ್ರಿಶೂರ್ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ತಪಾಸಣೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, ನಿಶಾ ರಾಫೆಲ್ ಅವರ ಆಪ್ತ ಮೂಲಗಳು ಆರೋಪಗಳನ್ನು ತಳ್ಳಿಹಾಕಿವೆ. ಎರಡು ಫ್ಲಾಟ್‌ಗಳಿಗೆ ಸಂಬಂಧಿಸಿದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಿಶಾ ಮತ್ತು ದೂರುದಾರರ ಕುಟುಂಬದ ನಡುವೆ ಹಿಂದಿನಿಂದಲೂ ಕಾನೂನು ಸಂಘರ್ಷ ಹಾಗೂ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವು ಎಂದು ನಿಶಾ ಪರವಾಗಿರುವವರು ವಾದಿಸಿದ್ದಾರೆ. ಅದೇ ಹತಾಶೆಯಿಂದ ಈ ರೀತಿಯ ಸುಳ್ಳು ದೂರು ನೀಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸುತ್ತಿರುವ ತ್ರಿಶೂರ್ ಪಶ್ಚಿಮ ಠಾಣೆ ಪೊಲೀಸರು, ದೂರು, ವೈದ್ಯಕೀಯ ದಾಖಲೆಗಳು ಮತ್ತು ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post