ಮಂಗಳೂರು : ಮಂಗಳೂರಿನಲ್ಲಿ ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ಧಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣ ದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012 ನೇ ಇಸವಿಯಲ್ಲಿ ನಗರದ ಫಳ್ನೀರ್ ವೆಸ್ಟ್ಗೇಟ್ ಟವರ್ಸ್ ಕಟ್ಟಡದಲ್ಲಿರುವ ನ್ಯಾಷನಲ್ ಮೆಡಿಕಲ್ ಬಳಿಯಲ್ಲಿರುವ ಕಾಯಿನ್ ಬೂತ್ ನ ಬಳಿ ರವಿಪೂಜಾರಿಯು ಒಳಸಂಚು ನಡೆಸಿ ಶೈಲೇಶ್ ರಾಜ @ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿಘಟನೆಗಳ ಸಮಯ ರವಿಪೂಜಾರಿ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದು, 2021 ನೇ ಇಸವಿಯಲ್ಲಿ ರವಿ ಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ರವಿಪೂಜಾರಿ ವಿರುದ್ದ ಧಾಖಲಾದ ಎರಡು ಪ್ರಕರಣಗಳಲ್ಲಿ ಮಾನ್ಯ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆ.ಎಂ.ಎಫ಼್.ಸಿ. ನ್ಯಾಯಾಲಯ ಮಂಗಳೂರು, ಸೇರಿ ಒಟ್ಟು 4 ಪ್ರಕರಣಗಳಲ್ಲಿ ರವಿಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಲಾಗಿದೆ. ಬಿಜೈ ರಾಜಾ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಯವರು ರವಿ ಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿರುತ್ತಾರೆ. ಇನ್ನು ರವಿ ಪೂಜಾರಿಯ ವಿರುದ್ದ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ.
ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲರಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post