ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ ‘ಯೋಗಿ ಸರ್ಕಾರ’ ರಚನೆಯಾಗುತ್ತಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಕಮಾಲ್ ಮಾಡಿದ್ದು, ಸಿಎಂ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಸತತ 2ನೇ ಬಾರಿಗೆ ಅಧಿಕಾರಿದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಅಂದರೆ 271 ಸ್ಥಾನಗಳಲ್ಲಿ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿ ನಿಂತಿದೆ. ಇನ್ನು 2ನೇ ಅತೀ ದೊಡ್ಡ ಪಕ್ಷವಾಗಿ ಸಮಾಜವಾದಿ ಪಕ್ಷವು ಇದ್ದು ಈ ವರೆಗಿನ ಫಲಿತಾಂಶದಲ್ಲಿ ಎಸ್ ಪಿ ಪಕ್ಷ 125 ಸ್ಥಾನಗಳಲ್ಲಷ್ಟೇ ಮುನ್ನಡೇ ಕಾಯ್ದುಕೊಂಡಿದೆ.
ಉಳಿದಂತೆ ಮಾಯಾವತಿ ಅವರ ಬಿಎಸ್ ಪಿ 3, ಕಾಂಗ್ರೆಸ್ 1 ಮತ್ತು ಇತರರು 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ, ಬಿಜೆಪಿ ಮರಳಿ ಅಧಿಕಾರಕ್ಕೇರುವುದು ಬಹುತೇಕ ಖಚಿತಗೊಂಡಿದೆ.
37 ವರ್ಷಗಳಲ್ಲೇ ಇದೇ ಮೊದಲು
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದರೆ, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದಂತಾಗಲಿದೆ. ಅಂತೆಯೇ ಯೋಗಿ ಆದಿತ್ಯನಾಥ್ ಅವರೇ ಇನ್ನೊಂದು ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರೆ ಅದೂ ಸಹ ದಾಖಲೆಯಾಗಲಿದೆ.
Discover more from Coastal Times Kannada
Subscribe to get the latest posts sent to your email.
Discussion about this post