ಪುತ್ತೂರು ಮೇ.10: ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚೇತನ್ (33) ಸಾವನ್ನಪ್ಪಿದ ಯುವಕ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪೋಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ರಾತ್ರಿ ಕುಡಿದು ಬಂದು ತಾಯಿ ಜೊತೆ ಜಗಳ : ಇನ್ನು ನಿನ್ನೆ(ಮೇ.09) ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್, ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಕುರಿತು ಯೂಸುಫ್, ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಬಳಿಕ ಯೂಸುಫ್ ಮನೆಗೆ ಬಂದ ಚೇತನ್ ತಾಯಿ, ನಾಯಿಯನ್ನು ಕಟ್ಟುವ ಸಂಕೊಲೆಯನ್ನು ತಂದು ಚೇತನ್ ಸೊಂಟಕ್ಕೆ ಹಾಕಿ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಮನೆಗೆ ಎಳೆದೊಯ್ದಿದ್ದರು.
ಈ ವೇಳೆ ಆತನನ್ನು ಎಳೆಯುವ ಸಮಯದಲ್ಲಿ ಕುತ್ತಿಗೆಗೆ ಸುತ್ತಿಕೊಂಡಿದ್ದ ಸಂಕೋಲೆ ಬಿಗಿದು ಚೇತನ್ ಸಾವನ್ನಪ್ಪಿರುವ ಶಂಕೆ ಎದುರಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಶವಪರೀಕ್ಷೆಯಾಗಿ ಮೃತದೇಹವನ್ನು ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Discover more from Coastal Times Kannada
Subscribe to get the latest posts sent to your email.








Discussion about this post