ಮಂಗಳೂರು, ಜೂ.10: ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕುಲಶೇಖರದ ಸಿಲ್ವರ್‌ಗೇಟ್ ನಿವಾಸಿ ಜನನ್ ಜಗನ್ನಾಥ್ (29) ಹಾಗೂ ಬೋಳಾರದ ಪರೀಕ್ಷಿತ್ (33) ಬಂಧಿತ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ನಗರದ ಗೂಡ್ಸ್‌ಶೆಡ್ ಬಳಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ 11.68 ಗ್ರಾಂ ತೂಕದ ಎಂಡಿಎಂಎ, 1,110 ರೂ. ನಗದು, ಮೂರು ಮೊಬೈಲ್, 1 ತೂಕಮಾಪಕ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸರು ಕಾರ್‌ಸ್ಟ್ರೀಟ್‌ನ ಸುಶಾನ್ ಪೂಜಾರಿ (27) ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ.
ಈಗಾಗಲೆ ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಜೂ.6ರಂದು ನಗರದ ಹೊಯ್ಗೆಬಜಾರ್ ನಿವಾಸಿ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿದ್ದರು. ಪ್ರಣಾಮ್ ಕೋಟ್ಯಾನ್ ನೀಡಿದ ಮಾಹಿತಿಯಂತೆ ಸುಶಾನ್ ಪೂಜಾರಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಪ್ರಕಟನೆ ತಿಳಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post