ತಿರುವನಂತಪುರ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷ ಹಾಕಿಯಲ್ಲಿ 41 ವರ್ಷಗಳ ಬಳಿಕ ಭಾರತ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇರಳದ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರಿಗೆ ದುಬೈ ಮೂಲದ ಉದ್ಯಮಿ, 1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ.
ವಿಪಿಎಸ್ ಹೆಲ್ತ್‌ಕೇರ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಶಂಸೀರ್ ವಯಲಿಲ್ ಅವರು, ಶ್ರೀಜೇಶ್ ಅವರಿಗೆ ನಗದು ಬಹುಮಾನವನ್ನು ಘೋಷಿಸಿದ್ದಾರೆ.
‘ಒಲಿಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಮಹತ್ತರ ಪಾತ್ರ ವಹಿಸಿದ್ದಾರೆ. ಭಾರತೀಯ ಹಾಕಿ ಕ್ರೀಡೆಗೆ ಅವರ ಕೊಡುಗೆಯನ್ನು ಗುರುತಿಸಿ ನಗದು ಬಹುಮಾನ ಘೋಷಿಸಲು ಖುಷಿಪಡುತ್ತಿದ್ದೇವೆ’ ಎಂದು ದುಬೈಯಲ್ಲಿ ನೆಲೆಸಿರುವ ಕೇರಳ ಮೂಲದ ಉದ್ಯಮಿ ತಿಳಿಸಿದ್ದಾರೆ.
Goalkeeper PR Sreejesh played a crucial role in helping the Indian hockey team secure bronze at the Olympics. We acknowledge his contributions and are pleased to announce a cash reward of Rs. 1 crore for him. @16Sreejesh pic.twitter.com/etJ63VmDwu
— Dr. Shamsheer Vayalil (@drshamsheervp) August 9, 2021
Discover more from Coastal Times Kannada
Subscribe to get the latest posts sent to your email.
Discussion about this post