• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು; ಒಂದೇ ಕುಟುಂಬದ ನಾಲ್ವರ ಹಂತಕ ಪ್ರವೀಣ್‌ಗೆ ಬಿಡುಗಡೆ ಭಾಗ್ಯ ಬೇಡ ಎಂದು ಪತ್ನಿ ಮನವಿ!

Coastal Times by Coastal Times
August 10, 2022
in ಕರಾವಳಿ
ಮಂಗಳೂರು; ಒಂದೇ ಕುಟುಂಬದ ನಾಲ್ವರ ಹಂತಕ ಪ್ರವೀಣ್‌ಗೆ ಬಿಡುಗಡೆ ಭಾಗ್ಯ ಬೇಡ ಎಂದು ಪತ್ನಿ ಮನವಿ!
200
VIEWS
WhatsappTelegramShare on FacebookShare on Twitter

ಮಂಗಳೂರು, ಆಗಸ್ಟ್‌ 9: ಸಾಮಾನ್ಯವಾಗಿ ಕೈದಿಯೋರ್ವನನ್ನು ಬಿಡುಗಡೆ ಮಾಡಿ ಎಂದು ಮನೆಮಂದಿ ರಾಷ್ಟ್ರಪತಿಗಳವರೆಗೆ ಹೋಗಿ ಮನವಿ ಮಾಡುವುದನ್ನು ನಾವು ನೋಡುತ್ತೇವೆ. ಆದರೆ ಗುಂಪು ಗುಂಪುಗಾಗಿ ಪೊಲೀಸ್ ಕಮಿಷನರ್ ಕಚೇರಿಗೆ ದಾಂಗುಡಿಯಿಟ್ಟ ಕುಟುಂಬಸ್ಥರು ತಮ್ಮ ಕುಟುಂಬದ ವ್ಯಕ್ತಿಯನ್ನು ಬಿಡುಗಡೆ ಮಾಡಿ ಎಂದು ಕೇಳಿಲ್ಲ. ಬದಲಾಗಿ ನಾಲ್ಕು ಕೊಲೆ ಮಾಡಿರುವ ಆ ಕೊಲೆಗಡುಕನನ್ನು ಜೈಲಿನಿಂದ ಬಿಡುಗಡೆ ಮಾಡದಿರಿ ಎಂದು ಪೂರ್ಣ ಕುಟುಂಬವೇ ಬಂದು ಮನವಿ ಮಾಡಿರುವ ಘಟನೆಗೆ ಮಂಗಳೂರು ಸಾಕ್ಷಿಯಾಗಿದೆ. ಮಂಗಳೂರಿನ ವಾಮಂಜೂರಿನ ಒಂದೇ ಕುಟುಂಬದ ನಾಲ್ವರನ್ನು 1994ರಲ್ಲಿ ಹತ್ಯೆ ಮಾಡಿದ ಕೊಲೆಪಾತಕಿ ಪ್ರವೀಣ್ ಕುಮಾರ್‌ಗೆ ಸ್ವಾತಂತ್ರ್ಯ ಅಮೃತೋತ್ಸವದ ಈ ಸಂದರ್ಭದಲ್ಲಿ ಸನ್ನಡತೆಯ ಆಧಾರದಲ್ಲಿ ಸರಕಾರ ಬಿಡುಗಡೆ ಭಾಗ್ಯ ಕರುಣಿಸಿತ್ತು. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಲಾಗುತ್ತಿರುವ ವಿಚಾರ ಆತನ ಕುಟುಂಬ ವಲಯದಲ್ಲಿ ಭಾರೀ ಆತಂಕ ಮೂಡಿಸಿದೆ‌. ಆದ್ದರಿಂದ ಹತ್ಯೆಯಾದವರ ಕುಟುಂಬದ ಸುಮಾರು 50ರಷ್ಟು ಮಂದಿ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್‌ರಿಗೆ ಪ್ರವೀಣ್‌ ಬಿಡುಗಡೆ ಮಾಡಬಾರದೆಂದು ಮೇಲಾಧಿಕಾರಿಗಳಿಗೆ ಮನವರಿಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ‌.

ಕೊಲೆಪಾತಕನ ಪತ್ನಿಯಿಂದಲೇ ಮನವಿ : ಸ್ವತಃ ಕೊಲೆಪಾತಕಿ ಪ್ರವೀಣ್ ಕುಮಾರ್ ಪತ್ನಿ ಅನಸೂಯಾ ಅವರೂ ಆತನ ಬಿಡುಗಡೆ ಮಾಡಬಾರದೆಂದು ಆಯುಕ್ತರಿಗೆ ಮನವಿ ಮಾಡಿದ್ದಾರೆ. ಹಂತಕ ಪ್ರವೀಣ್ ಕುಮಾರ್ ಮಾಡಿರುವ ಕೃತ್ಯದಿಂದ ಆತನ ಪೂರ್ತಿ ಕುಟುಂಬವೇ ಆತನ ವಿರುದ್ಧ ತಿರುಗಿ ಬಿದ್ದಿದೆ. ಈ ಘಟನೆ ಅಂದು ಇಡೀ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಇಡೀ ದೇಶದಲ್ಲಿಯೇ ಸಂಚಲನ ಸೃಷ್ಟಿಸಿತ್ತು. ಇದೀಗ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ಮಾಡಬೇಡಿ ಎಂದು ಸ್ವತಃ ಆತನ ಕುಟುಂಬಸ್ಥರೇ ಮನವಿ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ.

ಹಣದಾಸೆಗೆ ನಾಲ್ವರ ಕೊಲೆ : 1994, ಫೆಬ್ರವರಿ 23 ರಂದು ರಾತ್ರಿ ವಾಮಂಜೂರಿನಲ್ಲಿ ಪ್ರವೀಣ್ ತನ್ನ ಸಂಬಂಧಿಕರೇ ಆಗಿದ್ದ ಅಪ್ಪಿ ಶೇರಿಗಾರ್ತಿ (75), ಆಕೆಯ ಪುತ್ರಿ ಶಕುಂತಲಾ (36), ಮೊಮ್ಮಗಳು ದೀಪಿಕಾ(9) ಮತ್ತು ಅಪ್ಪಿ ಅವರ ಪುತ್ರ ಗೋವಿಂದ (30) ಎಂಬುವವರನ್ನು ಕೊಲೆಗೈದು ಚಿನ್ನದೊಂದಿಗೆ ಪರಾರಿಯಾಗಿದ್ದ. ಆರೋಪಿಗೆ ಮಂಗಳೂರಿನ ನ್ಯಾಯಾಲಯ 2002ರಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಮರಣದಂಡನೆ ಶಿಕ್ಷೆಯ ಬಳಿಕ ರಾಷ್ಟ್ರಪತಿಗೆ ಕ್ಷಮಾಪಣೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು 2013, ಎಪ್ರಿಲ್‌ 4 ರಂದು ರಾಷ್ಟ್ರಪತಿ ತಿರಸ್ಕರಿಸಿದ್ದರು. ಆದರೆ 2014ರಲ್ಲಿ ಸುಪ್ರೀಂ ಕೋರ್ಟು ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು.

ಕುಟುಂಬದವರಿಗೆ ಜೀವಬೆದರಿಕೆ : ಜೈಲಿನಲ್ಲಿದ್ದಾಗ ನೋಡಲು ಹೋದಾಗ ನನ್ನನ್ನು ಹಾಗೂ ಕುಟುಂಬದ ಇತರರನ್ನು ಕೂಡ ಕೊಲೆ ಮಾಡುವುದಾಗಿ ಹೇಳಿ ಉಗುಳಿದ್ದ. ಆತ ಜೈಲಿನಿಂದ ಬಂದರೆ ಕುಟುಂಬದವರ ಜೀವಕ್ಕೆ ಭಯವಿದೆ. ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು ಎಂದು ಸೀತಾರಾಮ ಗುರುಪುರ ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವ, ಶ್ರೀಮಾತಾ ಅನ್ನಛತ್ರದ ಉದ್ಘಾಟನೆ

Next Post

ಬೈಕ್​ನಲ್ಲೇ ದೇಶ-ವಿದೇಶ ಸುತ್ತಿ ನಾರಿ ಶಕ್ತಿ ಸಾಬೀತುಪಡಿಸಿದ್ದಾರೆ ಕಾಸರಗೋಡು ಮೂಲದ ಬೈಕ್ ರೈಡರ್ ಅಮೃತಾ ಜೋಷಿ.

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d