• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ ಕಾಲೇಜು ವಿಡಿಯೋ ಕೇಸ್ | ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದೇವೆ ಎಂದ ಸಿಐಡಿ ಎಡಿಜಿಪಿ

Coastal Times by Coastal Times
August 10, 2023
in ಕರಾವಳಿ
ಉಡುಪಿ ಕಾಲೇಜು ವಿಡಿಯೋ ಕೇಸ್ | ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದೇವೆ ಎಂದ ಸಿಐಡಿ ಎಡಿಜಿಪಿ
39
VIEWS
WhatsappTelegramShare on FacebookShare on Twitter

ಉಡುಪಿ: ಇಲ್ಲಿನ ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಸಿಐಡಿ ಎಸ್ ಪಿ ರಾಘವೇಂದ್ರ ‌ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಐಡಿ ಎಡಿಜಿಪಿ ಮನೀಷ್, ” ಉಡುಪಿಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಕೂಡಾ ಪಡೆದುಕೊಳ್ಳಲಾಗಿದೆ. ಈಗಾಗಲೇ ನಾನುಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಮಾತ್ರವಲ್ಲದೇ ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕು ಈ ಬಗ್ಗೆ ಚರ್ಚಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನು ಕಾಲೇಜಿಗೆ ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.

ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಡಿವೈಎಸ್‌ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.

ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಿದ ಬಳಿಕ ಪ್ರಕರಣದ ತನಿಖೆ ಆದ ನಂತರ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆಮಾಡಲಿದ್ದೇವೆ. ಸಿಐಡಿ ತನಿಖೆ ಉಡುಪಿಯಲ್ಲಿ ಮುಂದುವರೆಯುತ್ತದೆ. ಮೂರು ಮೊಬೈಲ್ ಎಫ್ಎಸ್ಎಲ್ ವರದಿಗೆ ಕಾಯುತ್ತಿದ್ದೇವೆ. ತನಿಖೆ ಪೂರ್ಣಗೊಂಡ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರೋಗಿಗೆ ಯೂರಿನ್‌ ಬ್ಯಾಗ್‌ ಬದಲು ಸ್ಪ್ರೈಟ್ ಬಾಟಲ್ ಬಳಸಿದ ಸರ್ಕಾರಿ ಆಸ್ಪತ್ರೆ!

Next Post

ಮಂಗಳೂರು| ಲಾಟರಿ ಸ್ಕೀಮ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ

Related Posts

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ
ಕರಾವಳಿ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
31
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
60
Next Post
ಮಂಗಳೂರು| ಲಾಟರಿ ಸ್ಕೀಮ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ

ಮಂಗಳೂರು| ಲಾಟರಿ ಸ್ಕೀಮ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ

Discussion about this post

Recent News

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
31
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d