ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಹಾಗೂ ಶ್ರೀ ವಿದ್ಯಾಂಜನೇಯ ವ್ಯಾಯಾಮ ಶಾಲೆಯ ಆಶ್ರಯದಲ್ಲಿ ಉಳ್ಳಾಲ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ, ಸೆ,14 ಭಾನುವಾರ ಬೆಳಿಗ್ಗೆ 10ರಿಂದ ಉಳ್ಳಾಲದ ಪುರಸಭೆ ಮೈದಾನದಲ್ಲಿ ದಸರಾ ಕಬಡ್ಡಿ -2025 ಜರಗಲಿದೆ.
ದಿ| ರವೀಂದ್ರ ಮರೋಳಿ ಸ್ಮರಣಾರ್ಥ ನಡೆಯಲಿರುವ ಈ ಪಂದ್ಯಾವಳಿ ಉಳ್ಳಾಲ ತಾಲೂಕು ಮಟ್ಟದಲ್ಲಿ ನಡೆಯಲಿದೆ. ಪ್ರಥಮ ಸ್ಥಾನ ವಿಜೇತರಿಗೆ ರೂ.10,000 ಮತ್ತು ಟ್ರೋಫಿ, ದ್ವಿತೀಯ ಸ್ಥಾನಿಗಳಿಗೆ ರೂ. 6000 ಮತ್ತು ಟ್ರೋಫಿ, ತೃತೀಯ ಹಾಗೂ ಚತುರ್ಥ ಸ್ಥಾನಿಗಳಿಗೆ ತಲಾ ರೂ.3000 ನಗದು ಹಾಗೂ ಟ್ರೋಫಿಯನ್ನು ನೀಡಲಾಗುವುದಲ್ಲದೆ, ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ಸವ್ಯಸಾಚಿ ಪ್ರಶಸ್ತಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 8880462587 ಅಥವಾ 7899445010 ಮೊಬೈಲನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post