ಬೆಂಗಳೂರು: ನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಸೆಪ್ಟಂಬರ್ 27 ಹಾಗೂ 29 ರಂದು ಎರಡು ದಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆದಿತ್ತು. ಸರಳೀಕೃತ ಮಾದರಿಯಲ್ಲಿ ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆದಿತ್ತು.
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ ಪರೀಕ್ಷೆ ನಡೆಸಲಾಗಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post