ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ಮೊಸಳೆ ʼಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು. ಈ ದೇವಾಲಯದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯೇ ಮೊಸಳೆಯ ವಾಸಸ್ಥಾನ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು.


ದೇವಸ್ಥಾನದ ಆವರಣದಲ್ಲಿ ಬಬಿಯಾ ಮೊಸಳೆಯ ಅಂತಿಮ ವಿಧಿ ವಿಧಾನ ನಡೆಯಲಿದೆ. ನಿತ್ಯ ಎರಡು ಬಾರಿ ಪೂಜೆ ಬಳಿಕ ನೈವೇದ್ಯ ಸ್ವೀಕರಿಸುತ್ತಿದ್ದ ಮೊಸಳೆ, ದೇವರ ಮೊಸಳೆ ಎಂದೇ ಪ್ರಖ್ಯಾತಿ ಪಡೆದಿತ್ತು. ಎರಡು ವರ್ಷಗಳ ಹಿಂದೆ ನೀರಿನಿಂದ ಹೊರ ಬಂದು ದೇಗುಲ ಪ್ರವೇಶಿಸಿದ್ದ ಬಬಿಯಾ, ಮೊದಲ ಬಾರಿಗೆ ದೇಗುಲದ ಆವರಣಕ್ಕೆ ಬಂದಿದ್ದು ಭಕ್ತರ ಅಚ್ಚರಿಗೆ ಕಾರಣವಾಗಿತ್ತು. ಮೊಸಳೆ ಮಾಂಸಹಾರಿಯಾದರೂ, ಇಲ್ಲಿರುವ ಬಬಿಯ ಸಸ್ಯಹಾರಿ ಎನ್ನುವುದು ವಿಶೇಷ. ಹಿಂದೆ ಬ್ರಿಟಿಷರು ಈ ಜಾಗದಲ್ಲಿ ಟೆಂಟ್ ಹಾಕಿದ್ದಾಗ ಕೆರೆಯಲ್ಲಿ ಮೊಸಳೆಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ಬಬಿಯಾ ಎಂದು ಕರೆದಾಗ ಮೊಸಳೆ ಹೊರ ಬಂದಿತ್ತು. ಆಗ ಗುಂಡು ಹಾರಿಸಿ, ಮೊಸಳೆಯನ್ನು ಕೊಂದಿದ್ದರು. ಆ ಮೊಸಳೆ ಕೊಂದ ಬ್ರಿಟಿಷ್ ಅಧಿಕಾರಿ ಸ್ವಲ್ಪ ದಿವಸಗಳಲ್ಲಿಯೇ ವಿಷ ಹಾವು ಕಚ್ಚಿ ಅಸುನೀಗಿದ ಎಂದು ಹೇಳಲಾಗಿದೆ. ಅಚ್ಚರಿ ಎಂಬಂತೆ ಆ ಕೆರೆಯಲ್ಲಿ ಮತ್ತೊಂದು ಮೊಸಳೆ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಅಲ್ಲಿಯ ಪೂಜಾರಿ ಬಬಿಯಾ ಎಂಬ ಹೆಸರಿನಿಂದ ಕರೆಯುತ್ತಾರೆ. ಆ ಮೊಸಳೆಗೆ ಪ್ರತಿದಿನ ಮಧ್ಯಾಹ್ನ ಮಹಾಪೂಜೆ ಆದ್ಮೇಲೆ ನೈವೇದ್ಯ ಕೊಡುವ ಸಮಯಕ್ಕೆ ಬಬಿಯಾ ಎಂದು ಕರೆಯುತ್ತಾರೆ. ಆಗ ಸುರಂಗದಿಂದ ಹೊರಗೆ ಬಂದು ನೈವೇದ್ಯ ಸ್ವೀಕರಿಸುತ್ತಿತ್ತು ಈ ಮೊಸಳೆ. ಮೊಸಳೆಗೆ ಜನರು ಹರಕೆ ರೂಪದಲ್ಲಿಯೂ ನೈವೇದ್ಯ ಸಮರ್ಪಿಸುವ ಪದ್ಧತಿ ಇಲ್ಲಿದೆ. ಮೊಸಳೆ ಮಾಂಸಹಾರಿಯಾದರೂ, ಈ ಬಬಿಯಾ ಯಾರಿಗೂ ತೊಂದರೆಯೇ ಕೊಡುವುದಿಲ್ಲ. ಕೆರೆಯಲ್ಲಿರುವ ಮೀನುಗಳನ್ನೂ ಈ ಮೊಸಳೆ ತಿಂದಿದ್ದೇ ಇಲ್ಲ. ಅದರೆ ಇದೀಗ ಬಬಿಯಾ ಇಹಲೋಕ ತ್ಯಜಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post