ಮಂಗಳೂರು, ಅ.9: ನಗರದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಯೊಬ್ಬರಿಗೆ ಕಂಡೆಕ್ಟರ್ ಇತರ ಪ್ರಯಾಣಿಕರ ಸಮ್ಮುಖ ನಿಂದಿಸಿ ಮಾನಸಿಕ ಕಿರುಕುಳ ನೀಡಿದ ಆರೋಪ ಸೋಮವಾರ ಕೇಳಿ ಬಂದಿದೆ. ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ತಾನು ಬಸ್ಸಿಗೆ ಹತ್ತುವಾಗ ಚಾಲಕನು ದುಡುಕಿನಿಂದ ಮುಂದಕ್ಕೆ ಚಲಾಯಿಸಿದ. ಈ ವೇಳೆ ಕೆಳಗೆ ಬೀಳುವಂತಾಗಿ ಬೊಬ್ಬೆ ಹಾಕಿದೆ. ಆದರೂ ಚಾಲಕ ಬಸ್ಸನ್ನು ನಿಲ್ಲಿಸಲಿಲ್ಲ. ಈ ವೇಳೆ ಬಸ್ ಕಂಡೆಕ್ಟರ್ ನನ್ನ ಕೈ ಹಿಡಿದೆಳೆದು ನಿಮಗೆ ಬೇಗ ಬಸ್ಸಿಗೆ ಹತ್ತಲು ಆಗುವುದಿಲ್ಲವಾ? ಬಿದ್ದು ಸಾಯುತ್ತೀಯಾ? ಎಂದು ಬೈದಿದ್ದಾನೆ. ಇದಕ್ಕೆ ನಾನು ಪ್ರತಿರೋಧ ತೋರಿದಾಗ ನಾನು ಬಸ್ಸಿನಿಂದ ಇಳಿಯುವವರೆಗೆ ನನಗೆ ಅವಾಚ್ಯ ಶಬ್ದದಿಂದ ಬೈದು ಸಾರ್ವಜನಿಕರ ಮುಂದೆ ಮಾನಹಾನಿಗೊಳಿಸಿದ್ದಾನೆ ಎಂದು ವಕೀಲೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಆತನ ಫೋಟೋವನ್ನು ಮೊಬೈಲ್ನಲ್ಲಿ ತೆಗೆಯುವಾಗ ನಿನಗೆ ಏನು ಮಾಡಲು ಸಾಧ್ಯವಿದೆ. ಅದನ್ನು ಮಾಡು ಎಂದಿದ್ದಾನೆ. ಹಾಗಾಗಿ ಬಸ್ಸನ್ನು ಹತ್ತುವಾಗ ಕೆಳಗೆ ಬೀಳುವಂತಾದರೂ ನಿಲ್ಲಿಸದ ಚಾಲಕನ ಹಾಗೂ ಬಸ್ಸಿನಲ್ಲಿ ಉಡಾಫೆಯಿಂದ ವರ್ತಿಸಿ ಮಾನಸಿಕ ಕಿರುಕುಳ ನೀಡಿದ ಕಂಡೆಕ್ಟರ್ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ವಕೀಲೆ ಮುಫೀದಾ ರಹ್ಮಾನ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post