ಉಳ್ಳಾಲ : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆಯೊಂದಿಗೆ ಬಸ್ ಕ್ಲೀನರ್ ಆಗಿದ್ದ ಕಾಮುಕನೊಬ್ಬ ಪ್ಯಾಂಟ್ ಝಿಪ್ ಜಾರಿಸಿ ಗುಪ್ತಾಂಗ ತೋರಿಸಿದ್ದು ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ (KA51 AB 3649) ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಸ್ ಗುರುವಾರ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್(26) ಎಂಬಾತ ಪ್ಯಾಂಟ್ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಬಜ್ಪೆ ಕೆಂಜೂರು ನಿವಾಸಿ ಮಹಮ್ಮದ್ ಇಮ್ರಾನ್ ಎಂಬಾತನನ್ನು ಬಂಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post