ಬೈಕಂಪಾಡಿ: ಸೀಫುಡ್ ಕಂಪೆನಿಯೊಂದರಲ್ಲಿ ಅಮೋನಿಯಾ ಸೋರಿಕೆ ಆಗಿರುವ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ, ಪಣಂಬೂರು ಠಾಣೆಯ ಪೊಲೀಸರ ಭೇಟಿ ನೀಡಿದ್ದಾರೆ. ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಕಮಿಷನರ್, ಘಟನೆಯಲ್ಲಿ 26 ಜನ ಸಿಬ್ಬಂದಿಗಳು ಅಸ್ವಸ್ಥರಾಗಿದ್ದರು. ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಹೇಗೆ ಸೋರಿಕೆ ಆಗಿದೆ ಎನ್ನುವ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ಸೂಕ್ತ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ. ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು ಹನ್ನೊಂದು ಗಂಟೆ ಸುಮಾರಿಗೆ ಅಮೋನಿಯಂ ಸೋರಿಕೆ ಆಗಿತ್ತು.
ಸುತ್ತಮುತ್ತಲಿನ ಕಂಪನಿಗಳ ಜನರನ್ನು ಕಾರ್ಮಿಕರನ್ನು ತೆರವುಗೊಳಿಸಲಾಗುತ್ತಿದ್ದು, ಪಣಂಬೂರು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post