ಹಾಸನ ; ವೃತ್ತಿ ಯಲ್ಲಿ ವಕೀಲೆ ಪ್ರವೃತ್ತಿ ಯಲ್ಲಿ ಕವಯತ್ರಿ ಮಕ್ಕಳ ಸಾಹಿತಿಯಾಗಿರುವ ಮಂಗಳೂರು ಮೂಲದ ಪರಿಮಳ ಮಹೇಶ್ ರಾವ್ ಇವರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾ ಅಧ್ಯಕ್ಷ ರಾಗಿ ಇಂದು ಅಧಿಕಾರ ಸ್ವೀಕರಿಸಿದರು.

ಪರಿಮಳ ಮಹೇಶ್ ರಾವ್


ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ 09-01-2023 ರಿಂದ 10-01-2023 ರ ತನಕ ನಡೆದ ಬೃಹತ್ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಎನ್.ಅಶೋಕ ನಿರ್ದೇಶನದಂತೆ , ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಅರುಣ್ ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಕುಸುಮ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post