ಬಂಟ್ವಾಳ, ಜ 11:ನಾಲ್ವರು ಮುಸುಕುದಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ರಾಬರಿ ಮಾಡಿದ ಘಟನೆ ಇಂದು ಬೆಳಂಬೆಳಿಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ.
ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ರಾಬರಿ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಬಂಗಾರಗಳು, 30 ಸಾವಿರನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ರಾಬರಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ.ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ.ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆಒಡ್ಡಿದಾಗ ಗೊದ್ರೇಜ್ ನಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮ ದವರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಇಂದು ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ. ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Discussion about this post