ಹಾವೇರಿ, ಜ.11: ಹಾವೇರಿ ಜಿಲ್ಲೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದ ಮಹಿಳೆಯನ್ನು ಥಳಿಸಿ, ಗ್ಯಾಂಗ್ ರೇಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಪೊಲೀಸ್ರು ಬಲೆ ಬೀಸಿದ್ದಾರೆ.
ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಥಳಿಸಿ, ಖಾಸಗಿ ಅಂಗಾಂಗವನ್ನು ಘಾಸಿಗೊಳಿಸಿ ಸಾಮೂಹಿಕ ಅತ್ಯಾಚಾರಗೈಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಮತ್ತೊಂದೆಡೆ ಅನೈತಿಕ ಪೊಲೀಸ್ ಗಿರಿ ಪ್ರಕರಣದ ಆರೋಪಿಗಳ ಮತ್ತೊಂದು ವಿಡಿಯೋ ವೈರಲ್ ಆಗಿದೆ.
ಜ.8ರ ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು ಎಂದು ಆರೋಪಿಸಿ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗ ಈ ಘಟನೆಯ ಎರಡು ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಎರಡನೇ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.
ಏಳು ಯುವಕರಿಂದ ಗ್ಯಾಂಗ್ ರೇಪ್ : ಹೋಟೆಲ್ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತ್ರಸ್ತ ಮಹಿಳೆ, “ಒಬ್ಬರಾದ ಮೇಲೆ ಒಬ್ಬರು ನನ್ನನ್ನು ಅತ್ಯಾಚಾರ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ಕೂಡ ಮಾಡಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.
Discussion about this post