ಕೊಣಾಜೆ: ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ನಡೆಯುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳ’ಕ್ಕೆ ಇಂದು ಬೆಳಗ್ಗೆ ಸಂಭ್ರಮದ ಚಾಲನೆ ಸಿಕ್ಕಿತು.
ಶ್ರೀಧಾಮ ಮಾಣಿಲದ ಶ್ರೀ ಮೋಹನ್ ದಾಸ್ ಸ್ವಾಮೀಜಿ ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿ, ಇಡೀ ಜಗತ್ತಿನಲ್ಲಿ ಇಂದು ಹಿಂಸೆ ತಾಂಡವವಾಡುತ್ತಿದೆ. ಇಡೀ ಜಗತ್ತಿಗೆ ಶಾಂತಿ, ಸಾಮರಸ್ಯ ಮತ್ತು ಏಕತೆಯ ಅಗತ್ಯವಿದೆ ಎಂದರು. ಕಂಬಳ ಜಾನಪದ ಕ್ರೀಡೆಯಷ್ಟೇ ಅಲ್ಲ, ಸಾಮರಸ್ಯದ ಕ್ರೀಡೆಯೂ ಹೌದು. ಕಂಬಳವು ನಮ್ಮ ತುಳುನಾಡಿನಲ್ಲಿ ಧಾರ್ಮಿಕ ಮೌಲ್ಯದೊಂದಿಗೆ ಸಾಮರಸ್ಯ ಸೃಷ್ಟಿಗೆ ಪ್ರೇರಣೆಯಾಗಲಿ. ಎಲ್ಲರೂ ಒಗ್ಗೂಡಿ ನಡೆಯುವಂತಹ ನರಿಂಗಾನ ಕಂಬಳ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜ್ಯ ವಿಧಾನಸಭಾ ಅಧ್ಯಕ್ಷ, ಕಂಬಳ ಸಮಿತಿಯ ಅಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಕಂಬಳಕ್ಕೆ ನಮ್ಮ ನಾಡಿನಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ನರಿಂಗಾನ ಕಂಬಳ ಕಳೆದ ಮೂರು ವರ್ಷಗಳಿಂದ ವೆಂಕಪ್ಪ ಕಾಜವ ಗೌರವಾಧ್ಯಕ್ಷತೆಯೊಂದಿಗೆ ಸರ್ವರು ಒಗ್ಗೂಡಿಕೊಂಡು ಮಾಡುವ ಇಡೀ ಊರಿನ ಕಂಬಳೋತ್ಸವ ಇದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನರಿಂಗಾನ ಕಂಬಳ ಸಮಿತಿ ಗೌರವಾಧ್ಯಕ್ಷರಾದ ಹಿರಿಯ ಕಂಬಳ ಪ್ರೇಮಿ ವೆಂಕಪ್ಪ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಬೋಳ ಸಂತ ಲಾರೆನ್ಸ್ ಚರ್ಚ್ ಧರ್ಮಗುರುಗಳಾದ ರೆ.ಫಾ.ಪೆಡ್ರಿಕ್ ಕೊರೆಯ, ಗಡಿಕಾರರಾದ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಸಜಿಪ ನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಮೊಕ್ತೇಸರರಾದ ಮುಳಿಂಜ ವೆಂಕಟೇಶ್ ಭಟ್, ಬೋಳಿಯಾರ್ ಗುತ್ತು ಗಡಿಪ್ರಧಾನರಾದ ಗುಣಕರ ಆಳ್ವ ಯಾನೆ ರಾಮ ರೈ, ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರ ದೇವಿಪ್ರಸಾದ್ ಪೊಯ್ಯತ್ತಾಯ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಡಿ.ಎಸ್ ಗಟ್ಟಿ, ಮುಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪ್ರಕಾಶ್ ಕುಂಪಲ, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಮಿತ್ತಕೋಡಿ ಪ್ರಶಾಂತ್ ಕಾಜವ, ಮಾಧ್ಯಮ ಸಂಚಾಲಕ ಸತೀಶ್ ಕುಮಾರ್ ಪುಂಡಿಕಾಯಿ ಮೊದಲಾದವರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post