ಗುರುಗ್ರಾಮ: ಗುರುಗ್ರಾಮದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿಕೊಂಡಿದ್ದರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಚಿಂಚೆಲ್ಸ್ ಪರಡೈಸೊ ವಸತಿ ಸಮುಚ್ಛಯದ 18 ಮಹಡಿಯ ಡಿ ಟವರ್‌ನಲ್ಲಿ ಈ ದುರಂತ ಸಂಭವಿಸಿದೆ. ಏಳನೇ ಮಹಡಿಯ ಮಾಲಕ ನವೀಕರಣ ಕಾಮಗಾರಿ ನಡೆಸುತ್ತಿದ್ದಾಗ ಆರನೇ ಮಹಡಿಯ ಛಾವಣಿ ಕುಸಿಯಿತು ಎನ್ನಲಾಗಿದೆ. ಈ ಕಟ್ಟಡದ ಎರಡನೇ ಮತ್ತು ಏಳನೇ ಮಹಡಿಯಲ್ಲಿ ಮಾತ್ರ ಜನ ವಾಸವಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಎನ್ ಡಿಆರ್ ಫ್ ಹಾಗೂ ಎಸ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ, ಅರ್ತ್ ಮೂವಿಂಗ್ ಯಂತ್ರಗಳು ಹಾಗೂ ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಜಿಲ್ಲಾಧಿಕಾರಿ ನಿಶಾಂತ್ ಯಾದವ್ ಈ ಬಗ್ಗೆ ಮಾತನಾಡಿದ್ದು ಓರ್ವ ವ್ಯಕ್ತಿ ಈ ಘಟನೆಯಲ್ಲಿ ಮೃತಪಟ್ಟಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದ್ದು ಓರ್ವ ಮಹಿಳೆಯೂ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post