• About us
  • Contact us
  • Disclaimer
Wednesday, February 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

Coastal Times by Coastal Times
February 11, 2026
in ಕ್ರೈಮ್ ನ್ಯೂಸ್
ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ
2
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರಿನ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ವಿವರ: 2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು ಆರೋಪಿ ತನ್ನ ಬೈಕ್‌ನಲ್ಲಿ ಕುಳ್ಳಿರಿಸಿ ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಕರೆದುಕೊಂಡು ಅಲ್ಲಿನ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಮತ್ತು ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯನ್ನೂ ಹಾಕಿದ್ದ.

ಘಟನೆಗೆ ಸಂಬಂಧಿಸಿದಂತೆ ದಿನಾಂಕ 23-07-2025ರಂದು ದೂರು ದಾಖಲಿಸಿಕೊಂಡ ಮೂಲ್ಕಿ ಪೊಲೀಸರು, ಆರೋಪಿಯನ್ನು ಅದೇ ದಿನ ಬಂಧಿಸಿದ್ದರು. ನೊಂದ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿ ಎಂದು ಗೊತ್ತಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಂಗಳೂರಿನ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು.

ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ನೊಂದ ಬಾಲಕಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ ಎಂಟು ಮಂದಿಯನ್ನು ಸಾಕ್ಷಿ ವಿಚಾರಣೆ ನಡೆಸಿದ್ದು, 26 ದಾಖಲೆಗಳನ್ನು ಹಾಗೂ ಒಂದು ಮೊಬೈಲ್‌ನ್ನು ನಿಶಾನೆಯಾಗಿ ಗುರುತಿಸಲಾಯಿತು.

ಅಭಿಯೋಜನೆಯ ಪರವಾಗಿ ಸಾಕ್ಷಿ ನೀಡಿದ್ದ ನೊಂದ ಬಾಲಕಿ ಹಾಗೂ ಪೋಷಕರು ಅತ್ಯಾಚಾರ ನಡೆದಿದೆ ಎಂಬುದನ್ನು ಹೇಳಿದ್ದರು. ಸಾಕ್ಷಿಗಳೂ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನೀಡಿದ್ದರು. ಆದರೆ, ಬಲವಾದ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಹೊರೆಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆ ವಿಫಲವಾಗಿದೆ ಎಂದು ತೀರ್ಮಾನಿಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಮಾನ್ಯ ಕೆ.ಎಸ್. ಮಾನು ಅವರು ಆರೋಪಿಯನ್ನು ಆರೋಪದಿಂದ ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದರು. ಆರೋಪಿಯ ಪರವಾಗಿ ಮಂಗಳೂರಿನ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ವಾದಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

Related Posts

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್
ಕ್ರೈಮ್ ನ್ಯೂಸ್

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

February 11, 2026
38
ಮಂಗಳೂರು: ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ; ವಂಚಕ ಸೇರಿ ಇಬ್ಬರು ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು: ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ; ವಂಚಕ ಸೇರಿ ಇಬ್ಬರು ಅರೆಸ್ಟ್

February 11, 2026
63

Discussion about this post

Recent News

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
2
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

February 11, 2026
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಮುಂಬೈ ಉದ್ಯಮಿಗೆ ಕೋಟಿ ಕೋಟಿ ವಂಚನೆ; ಉಡುಪಿ ಮೂಲದ ದಂಪತಿ ವಿರುದ್ಧ ಕೇಸ್

February 11, 2026
ಮಂಗಳೂರು: ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ; ವಂಚಕ ಸೇರಿ ಇಬ್ಬರು ಅರೆಸ್ಟ್

ಮಂಗಳೂರು: ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ; ವಂಚಕ ಸೇರಿ ಇಬ್ಬರು ಅರೆಸ್ಟ್

February 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d