ಬೆಳ್ತಂಗಡಿ, ಮಾ 10: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಬೆಳ್ತಂಗಡಿ ತಾಲ್ಲೂಕಿನ ಕಣಿಯೂರು ಗ್ರಾಮದ ಜಗದೀಶ್ ಎಂಬಾತ ಶೆಡ್‌ನಲ್ಲಿ ಅಕ್ರಮವಾಗಿ ಡೀಸೆಲ್ ದಾಸ್ತಾನು ಮಾಡಿದ್ದ. ಪೊಲೀಸರು ದಾಳಿ ನಡೆಸಿ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಹಾಗೂ 35 ಲೀಟರ್ ಸಾಮರ್ಥ್ಯ 5 ಕ್ಯಾನ್‌ಗಳಲ್ಲಿ ಒಟ್ಟು 4,175 ಲೀಟರ್ ಡೀಸೆಲ್ ಜಪ್ತಿ ಮಾಡಿದರು. ಇವುಗಳ ಮೌಲ್ಯ ರೂ3.50 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955 (U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) ನಂತೆ ಪ್ರಕರಣ ದಾಖಲಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post