ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಕುತೂಹಲಕ್ಕೆ ಕಾರಣವಾಗಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಹುತೇಕ ಅಂತಿಮಗೊಂಡಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಕಿಯಿರುವ 3 ಕ್ಷೇತ್ರಗಳನ್ನು ಸೇರಿದಂತೆ ಹಲವು ಕ್ಷೇತ್ರಗಳ ಪಟ್ಟಿಯನ್ನು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿದ್ದಗೊಳಿಸಿದ್ದು ಯಾವುದೇ ಕ್ಷಣದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ರೈ ಚಾರೀಟೇಬಲ್ ಟ್ರಸ್ಟ್ ನ ಪ್ರವರ್ತಕ, ಉದ್ಯಮಿ ಅಶೋಕ್ ಕುಮಾರ್ ರೈಯವರಿಗೆ ಕಾಂಗ್ರೇಸ್ ಟಿಕೆಟ್ ಫೈನಲ್ ಆಗಿದೆ ಎಂದು ತಿಳಿದು ಬಂದಿದೆ. ಇವರು ಮೂರು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖ ಕಾಂಗ್ರೆಸ್ ಪಕ್ಷ ಸೇರಿದ್ದರು.
ರಾಜ್ಯದಲ್ಲಿ ಈಗಾಗಲೇ 166 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆದರೇ ಅಡಳಿತರೂಢ ಬಿಜೆಪಿ ಒಂದು ಕ್ಷೇತ್ರಕ್ಕೂ ಟಿಕೆಟ್ ಬಿಡುಗಡೆ ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಬಳಿಕ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸುವ ಹವಣಿಕೆಯಲ್ಲಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಇಂದು ಅಥಾವ ನಾಳೆ ಯನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆಯೆಂದು ಪಕ್ಷದ ಉನ್ನತ ನಾಯಕರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post