ಮಂಗಳೂರು: ನಗರದ ಯುವತಿಯೊಬ್ಬರು ಥಾಯ್ಲೆಂಡ್‌ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರ (28) ಎಂದು ಗುರುತಿಸಲಾಗಿದೆ. ಗೋರಿಗುಡ್ಡೆ ‘ಹಿಲ್ ಸ್ಟೀಕ್’ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ವಾಸವಿದ್ದ ಓಷಿನ್ ಪಿರೇರ ಅವರು ಒಲಿವಿಯಾ ಪಿರೇರ- ದಿ. ಆಸ್ಕರ ಮಾರ್ಟಿನ್ ಪಿರೇರ ದಂಪತಿಯ ಮಗಳು.
ರಜೆ ಕಳೆಯಲು ಎರಡು ದಿನಗಳ ಹಿಂದಷ್ಟೇ ಅವರು ಥಾಯ್ಲೆಂಡ್‌ಗೆ ತೆರಳಿದ್ದರು. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಕೆಯ ತಾಯಿ ಒಲಿವಿಯಾ ಪಿರೇರ ಅವರು ಬಂಧುಗಳ ಜೊತೆ ಮಂಗಳವಾರ ಥಾಯ್ಲೆಂಡ್‌ಗೆ ಪ್ರಯಾಣ ಬೆಳೆಸಿದರು.
ನಗರದ ಸೇಂಟ್ ಆಗ್ನೆಸ್ ಕಾಲೇಜು ಬಳಿ ಇರುವ ‘ಮಂಗಳೂರು ಬೇಕಿಂಗ್ ಕಂಪನಿ’ ರೆಸ್ಟೋರಂಟ್ ಒಡತಿಯಾಗಿದ್ದ ಅವರು ಉದಯೋನ್ಮುಖ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಮೃತರು, ತಾಯಿ, ಸಹೋದರ ಓಸ್ಬೋರ್ನ್ ಪಿರೇರಾ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post