ಮಡಿಕೇರಿ: ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ವಿರಾಜಪಟೇಟೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಬಂಧಿತರಿಂದ 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ತೂಕದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿವಮೊಗ್ಗದ ಒಬ್ಬರು ಹಾಗೂ ಉಳಿದ 9 ಮಂದಿ ಕೇರಳದವರಾಗಿದ್ದು ಎಲ್ಲರನ್ನೂ ಗುರುವಾರ ಬೆಳಿಗ್ಗೆ ಬಂಧಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಸ್.ಶಂಶುದ್ದೀನ್ (45), ಎಂ.ನವಾಜ್,(54), ವಿ.ಕೆ.ಲತೀಶ್, (53), ರಿಜೇಶ್.ವಿ, (40), ಪ್ರಶಾಂತ್.ಟಿ, (52), ಎ.ವಿ. ರಾಘವೇಂದ್ರ,. (48), ಬಾಲಚಂದ್ರನಾಯಕ್, (55), ಸಾಜುಥಾಮಸ್ (58), ಜೋಬಿಸ್.ಕೆ.ಕೆ. (33) ಎಂ.ಜಿಜೇಶ್ (40) ಬಂಧಿತ ಅರೋಪಿಗಳು. ಇವರಿಂದ 10 ಕೆ.ಜಿ 390 ಗ್ರಾಂ ಅಂಬರ್‌ಗ್ರೀಸ್ (ತಿಮಿಂಗಲದ ವಾಂತಿ) ನೋಟು ಎಣಿಸುವ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.
ಸ್ಪಮ್‌ರ್‍ವೇಲ್ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ.
ತಿಮಿಂಗಿಲ ವಾಂತಿಗೆ ಯಾಕಿಷ್ಟು ಬೇಡಿಕೆ? ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿ ಎನ್ನುವುದು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ. ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್ ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post