• About us
  • Contact us
  • Disclaimer
Wednesday, July 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

Coastal Times by Coastal Times
April 11, 2026
in ಕರಾವಳಿ
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
33
VIEWS
WhatsappTelegramShare on FacebookShare on Twitter

ಮಂಗಳೂರು: ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ. ಖಂಡಿತಾ ಈ ದಾಖಲೆ ಆಗಲಿದೆ ಎಂಬ ವಿಶ್ವಾಸವಿದೆ. ಸಾಧ್ಯವಾದಲ್ಲಿ ನಾನೂ ಕಾರ್ಯಕ್ರಮಕ್ಕೆ ಬರುವೆʼʼ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಕೊಂಕಣಿಯ ಪ್ರಮುಖ ಸಾಂಸೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಅಸ್ತಿತ್ವದ ಮಾಣಿಕ್ಯ ಮಹೋತ್ಸವ ಆಚರಣಾ ಸಂದರ್ಭದಲ್ಲಿ, ಇದೇ ನವೆಂಬರ್ 03 ರಿಂದ 15 ರವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತವನ್ನು ವೀಣೆಯ ಪ್ರತಿಕೃತಿ ಮೇಲಿರುವ 12 ವಿಭಿನ್ನ ರಂಗಿನ ದೀಪಗಳನ್ನು ಬೆಳಗಿಸಿ ಮತ್ತು ಹೂವಿನ ಮೊಗ್ಗಿನಿಂದ ಸಮಾವೇಶದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಗೌರವ ಅತಿಥಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸಂಗೀತ ನಿರ್ದೇಶಕ ಜೊಯೆಲ್ ಪಿರೇರಾ ಇವರಿಗೆ ಸಂಗೀತ ಬೇಟನ್ ಹಸ್ತಾಂತರಿಸಿ ಮಾತನಾಡಿದರು.ʻಮಹಾನ್ ಸಾಧನೆಗಳನ್ನು ಮಾಡಿದ ಮಾಂಡ್ ಸೊಭಾಣ್ ಸಂಸ್ಥೆಗೆ ಇದುವರೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಿಲ್ಲ. ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು. ಕೊಂಕಣಿಯ ಕೀರ್ತಿ ಬಾವುಟವನ್ನು ಸದಾಕಾಲ ಹಾರಿಸುವ ಸಂಸ್ಥೆಯ ಈ ಕಾರ್ಯಕ್ರಮಕ್ಕೆ ಸರಕಾರ ಅನುದಾನ ನೀಡಬೇಕು. ಈ ದಾಖಲೆಯೂ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ಗೌರವ ಅತಿಥಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಗೋವಾದ ಕಲಾವಿದ ಮೈಕಲ್ ಗ್ರೇಶಿಯಸ್ ಶುಭ ಹಾರೈಸಿದರು.

ಪ್ರಸ್ತಾವಿಕ ನುಡಿಗಳನ್ನಾಡಿದ ಅಧ್ಯಕ್ಷ ಲುವಿ ಪಿಂಟೊ, ಕೊಂಕಣಿ ಸಂಗೀತಕ್ಕೆ ಮಹೋನ್ನತ ಹಿರಿಮೆ ತಂದು ಕೊಟ್ಟ ಎರಿಕ್ ಒಝೇರಿಯೊರವರ ಕೆಲಸಗಳನ್ನು ಮುಂದುವರಿಸುವುದೇ ನಾವು ಅವರಿಗೆ ಸಲ್ಲಿಸುವ ನೈಜ ಶ್ರದ್ಧಾಂಜಲಿ. ಇದು ಕೇವಲ ಗಿನ್ನೆಸ್ ದಾಖಲೆಯ ಪ್ರಯತ್ನವಾಗದೆ, ಕೊಂಕಣಿ ಒಗ್ಗಟ್ಟನ್ನು ಆಚರಿಸುವ, ಕೊಂಕಣಿ ಬಾವುಟವನ್ನು ಜಗದೆತ್ತರಕ್ಕೆ ಏರಿಸುವ ಹಾಗೂ ಈ ಮೂಲಕ ಕೊಂಕಣಿ ಸಂಗೀತದ ಶ್ರೀಮಂತ ಪರಂಪರೆಯನ್ನು ಸಂಭ್ರಮಿಸುವ ಅವಕಾಶವಾಗಲಿದೆ. ಇದುವರೆಗೆ ನಮ್ಮ ಕಾರ್ಯಕ್ರಮದ ಶಿಸ್ತು, ಅಚ್ಚುಕಟ್ಟುತನ ನೋಡಿ ಜನರೇ ಸಹಕರಿಸಿದ್ದಾರೆ. ಈ ಕಾರ್ಯಕ್ರಮ ಕೂಡಾ ಎಲ್ಲರ ಸಹಕಾರದಿಂದ ಯಶಸ್ವಿಯಾಗಲಿದೆ. ಎಂದು ಹೇಳಿದರು.

ಗಾಯಕಿ ಜೊಯ್ಸ್ ಒಝೇರಿಯೊರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಸಂಘಟಕ ಸ್ಟ್ಯಾನಿ ಆಲ್ವಾರಿಸ್ ಮತ್ತು ಕಾರ್ಯದರ್ಶಿ ರೊನಾಲ್ಡ್ ಕ್ರಾಸ್ತಾ ಉಪಸ್ಥಿತರಿದ್ದರು. ರೈನಾ ಸಿಕ್ವೇರಾ ನೇತೃತ್ವದಲ್ಲಿ ಸುಮೇಳ್ ತಂಡದಿಂದ ಗಾಯನ ನಡೆಯಿತು. ಮಾಂಡ್ ಸೊಭಾಣ್ ನಡೆದು ಬಂದ ಹಾದಿಯ ಬಗ್ಗೆ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ಕಲಾಂಗಣ ಪಿರ್ಜೆಂತ್ ರೊಯ್ ಕ್ಯಾಸ್ತೆಲಿನೊ ಧನ್ಯವಾದ ಸಲ್ಲಿಸಿದರು. ಐರಿನ್ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

Next Post

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
30
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
46
Next Post
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Discussion about this post

Recent News

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
26
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d