• About us
  • Contact us
  • Disclaimer
Tuesday, June 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಡಿಕೇರಿ: SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

Coastal Times by Coastal Times
May 11, 2024
in ಕ್ರೈಮ್ ನ್ಯೂಸ್
ಮಡಿಕೇರಿ: SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್
138
VIEWS
WhatsappTelegramShare on FacebookShare on Twitter

ಮಡಿಕೇರಿ, ಮೇ.11: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್​ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ : ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮೀನಾ, ಈ ಕುಗ್ರಾಮದಲ್ಲಿ ಈ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ. ಆದರೆ ಆಕೆಯ ದುರಂತ ನೋಡಿ. ಒಂದು ಕಡೆ ಮೀನಾ ಮೇ.09ರಂದು ಎಸ್​ಎಸ್​ಎಲ್​ಸಿ ಪಾಸ್​ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೃತ ಮೀನಾ ಮನೆಯಿಂದ ನಾಲ್ಕು ಕಿ.ಮೀ ದೂರದಲ್ಲಿರುವ ಶಾಲೆಗೆ ತನ್ನ ಮನೆಯಿಂದ ಗುಡ್ಡ ಗಾಡು ರಸ್ತೆಯಲ್ಲಿ ನಿತ್ಯ ನಡೆದೇ ಸಾಗುತ್ತಿದ್ದಳು. ಪಾಠದಲ್ಲಿ ಮಾತ್ರವಲ್ಲ ಆಟದಲ್ಲೂ ಬಹಳ ಚೂಟಿ ಇದ್ದಳು. ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿದ್ದಳು. ಒಬ್ಬಳೇ ಆದ್ರೂ ಶಾಲೆಗೆ ಹೋಗ್ತಾಳಲ್ಲಾ ಅಂತ ಊರವರೆಲ್ಲಾ ಈಕೆಯ ಬಗ್ಗೆ ಹೆಮ್ಮೆ ಪಡ್ತಾ ಇದ್ರು. ಆದರೆ ಹದಿಹರೆಯದ ವಯಸ್ಸಿನಲ್ಲಿ ಈಕೆಗೆ ಲವ್​ ಆಗಿದೆ. 35 ವರ್ಷದ ಓಂಕಾರಪ್ಪ ಅಲಿಯಾಸ್ ಪ್ರಕಾಶ್ ಎಂಬುವವನ ಜೊತೆ ಮೀನಾಗೆ ಪ್ರೀತಿ ಬೆಳೆದಿತ್ತು.

ಮೀನಾಳ ಗ್ರಾಮದಿಂದ ಮೂರು ಕಿ.ಮೀಟರ್ ದೂರದ ಹಮ್ಮಿಯಾಲ ಗ್ರಾಮದ ಪ್ರಕಾಶ್ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಅಷ್ಟೋ ಇಷ್ಟೋ ಸಂಪಾದನೆ ಮಾಡುತ್ತಿದ್ದ. ಅದು ಬಿಟ್ಟರೆ ಕಳೆದೊಂದು ವರ್ಷದಿಂದ ಮೀನಾಳ ಹಿಂದೆಯೇ ಸುತ್ತುತ್ತಿದ್ದ. ಇವರಿಬ್ಬರು ಪ್ರೀತಿಸ್ತಾ ಇದ್ದುದ್ದು ಇಡೀ ಊರಿಗೆ ಗೊತ್ತಿತ್ತು. ಇವರಿಬ್ಬರ ಆತ್ಮೀಯತೆ ಎಷ್ಟಿತ್ತೆಂದರೆ ಈತನೇ ತನ್ನ ಬೈಕಿನಲ್ಲಿ ಮೀನಾಳನ್ನ ಮನೆಯಿಂದ ಶಾಲೆಗೆ ಡ್ರಾಪ್ ಮಾಡುತ್ತಿದ್ದ. ಮೇ.09ರ ಎಸ್​ಎಸ್​ಎಲ್​ಸಿ ಫಲಿತಾಂಶದ ದಿನವೇ ಮೀನಾ ಹಾಗೂ ಪ್ರಕಾಶ್​​ಗೆ ನಿಶ್ಚಿತಾರ್ಥ ನೆರವೇರಿತ್ತು. ಬಂಧು ಮಿತ್ರರ ಎದುರು ಇಬ್ಬರು ಖುಷಿ ಖುಷಿಯಾಗಿಯೇ ಕೇಕ್​ ಕಟ್ ಮಾಡಿ ರಿಂಗ್ ಪಾಸ್ ಮಾಡಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ ಅಪ್ರಾಪ್ತೆಗೆ ಎಂಗೇಜ್ಮೆಂಟ್​ ನಡೆಯುತ್ತಿದೆ ಎಂಬ ಮಾಹಿತಿಯನ್ನ ಯಾರೋ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆ ಅಧಿಕಾರಿಗಳು ಮೀನಾಳ ಪೋಷಕರಿಗೆ ಈಗಲೇ ಮದುವೆ ಮಾಡದಂತೆ ತಿಳಿ ಹೇಳಿದ್ದಾರೆ.

ಮೀನಾಳಿಗೆ 18 ವರ್ಷ ತುಂಬಿದ ಬಳಿಕವೇ ವಿವಾಹ ಮಾಡುವಂತೆ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡು ಬಂದಿದ್ದಾರೆ. ಇಷ್ಟೆಲ್ಲ ಆದ ಬಳಿಕ ಪ್ರಕಾಶ್​ ಮರ ಕಡಿಯುವ ಮಚ್ಚಿನೊಂದಿಗೆ ಮೀನಾಳ ಮನೆಗೆ ಬಂದಿದ್ದು ಮೀನಾ ಹಾಗೂ ಅವಳ ಪೋಷಕರ ಜೊತೆ ಜಗಳವಾಡಿದ್ದಾನೆ. 18 ವರ್ಷ ಆಗುವವರೆಗೆ ಮದುವೆ ಬೇಡ ಎಂದು ಪೋಷಕರು ಹೇಳಿದ್ದು ಕೋಪಗೊಂಡು ಜಗಳ ಜೋರಾಗಿದೆ. ಇದರಿಂದ ಕುಪಿತಗೊಂಡ ಪ್ರಕಾಶ್ ಮಚ್ಚಿನಿಂದ ಮೊದಲು ತಾಯಿ ಜಾನಕಿಯ ಕೈ ಕಡಿದಿದ್ದಾನೆ, ಜಾನಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಡೆಯಲು ಬಂದ ತಂದೆ ಸುಬ್ರಮಣಿಗೆ ಜಾಡಿಸಿ ಒದ್ದ ರಭಸಕ್ಕೆ ಅವರೂ ಕುಸಿದು ಬಿದ್ದಿದ್ದಾರೆ. ಬಳಿಕ ಪ್ರಕಾಶ್, ಮೀನಾಳನ್ನ ಎಳೆದೊಯ್ದಿದ್ದಾನೆ. ಮನೆಯಿಂದ ಅಂದಾಜು 300 ಮೀಟರ್ ದೂರದವರೆಗೆ ಎಳೆದೊಯ್ದು ಮೀನಾಳ ಕುತ್ತಿಗೆಯನ್ನೇ ಕಡಿದು ರುಂಡ ಮುಂಡ ಬೇರ್ಪಡಿಸಿ ರುಂಡದೊಂದಿಗೆ ಪರಾರಿಯಾಗಿದ್ದ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

Next Post

ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

Related Posts

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಕ್ರೈಮ್ ನ್ಯೂಸ್

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
30
ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
72
Next Post
ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

Discussion about this post

Recent News

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
58
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d