ಕಾಪು: ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಕಟಪಾಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಕಟಪಾಪಡಿ ಸಮೀಪದ ಸರಕಾರಿ ಗುಡ್ಡೆಯ ನಿವಾಸಿ ಇಕ್ಬಾಲ್(32) ಎಂದು ಗುರುತಿಸಲಾಗಿದೆ.

ಹೂವಿನ ವ್ಯಾಪಾರ ನಡೆಸುತ್ತಿದ್ದ ಇವರು ತನ್ನ ಬೈಕಿನಲ್ಲಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸು, ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತದೇಹವನ್ನು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post