ಬೆಂಗಳೂರು, ಜೂ 10: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು.
ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬರು, ಪಲ್ಯ ನೀಡಲಾಗಿದೆ. ಆದ್ರೆ, ಪ್ರಜ್ವಲ್ , ಜೈಲಿನ ಕ್ವಾರೆಂಟೈನ್ ಬ್ಯಾರಕ್ ನಲ್ಲಿ ಮೌನಕ್ಕೆ ಶರಣಾಗಿದ್ದಾರೆ.
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಜ್ವಲ್ ರೇವಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಆಗ ಜಡ್ಜ್ ನಿಮಗೆ ಕಸ್ಟಡಿಯಲ್ಲಿ ಪೊಲೀಸರು ತೊಂದರೆ ಕೊಟ್ರಾ ಎಂದು ಪ್ರಶ್ನಿಸಿದರು. ಆಗ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಉತ್ತರಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post