ಕುಂದಾಪುರ, ಜೂನ್ 10 : ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿ ಯುವತಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ. ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.
ಯಾಸ್ಮಿನ್ ಹಲ್ಲೆಗೈದ ಆರೋಪಿ. ಮಾವಿನಕಟ್ಟೆಯ ಮೆಡಿಕಲ್ಗೆ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ. ಕೊಟ್ಟಳು. ಚಿಲ್ಲರೆ ಇಲ್ಲ, ಕೊಡಿ ಎಂದ ಯುವತಿ ಹೇಳಿದ್ದಾಳೆ. ಆದರೆ ಯಾಸ್ಮಿನ್ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ. ಹಲ್ಲೆಗೊಳಗಾದ ಲಕ್ಷ್ಮೀ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಘಟನೆ ನಡೆದ ಔಷಧ ಅಂಗಡಿಗೂ ಭೇಟಿ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಘಟನೆ ಕುರಿತಂತೆ ಕುಂದಾಪುರ ಗ್ರಾಮಾಂತರ ಠಾಣೆ ಯಲ್ಲಿ ಕೇಸು ದಾಖಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post