ಬೆಂಗಳೂರು: ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ(51) ಅವರು ಗುರುವಾರ (ಜುಲೈ 11)ರಾತ್ರಿ ವಿಧಿವಶರಾಗಿದ್ದಾರೆ. ಅಪರ್ಣಾ ಅವರು ದೂರದರ್ಶನದಲ್ಲಿ ನಿರೂಪಕಿಯಾಗಿ, ರೇಡಿಯೋ ಜಾಕಿಯಾಗಿ ಕನ್ನಡದ ಜನಪ್ರಿಯ ಮುಖವಾಗಿದ್ದರು. 1990 ರ ದಶಕದಲ್ಲಿ ದೂರ ದರ್ಶನದಲ್ಲಿ ದಲ್ಲಿ ಪ್ರಸಾರವಾದ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ಕೆಲಸ ಮಾಡಿದ್ದರು . 1984 ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಕೊನೆಯ ಚಿತ್ರ ಮಸಣದ ಹೂವು ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 2015 ಮತ್ತು 2021 ರ ನಡುವೆ ಕಾಮಿಡಿ ಶೋ, ಮಜಾ ಟಾಕೀಸ್‌ನಲ್ಲಿ ವರಲಕ್ಷ್ಮಿ ಪಾತ್ರವನ್ನು ನಿರ್ವಹಿಸಿಯೂ ಜನಪ್ರಿಯರಾಗಿದ್ದರು.
ಅಪರ್ಣಾ ಅವರು ಮೂಡಲ ಮನೆ ಮತ್ತು ಮುಕ್ತ ಮುಂತಾದ ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಯಾಗಿ ಕೆಲಸ ಮಾಡಿದ್ದಾರೆ . 2013 ರಲ್ಲಿ, ಅವರು ETV ಕನ್ನಡದಲ್ಲಿ ಪ್ರಸಾರವಾದ ಕನ್ನಡ ರಿಯಾಲಿಟಿ ಟೆಲಿವಿಷನ್ ಶೋ ಬಿಗ್ ಬಾಸ್‌ನ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post