ಉಳ್ಳಾಲ,ಆ.11 : ಎನ್‌ಐಎ ದಾಳಿ ನಡೆದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆಗೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಇರುವ ಇದಿನಬ್ಬ ಪುತ್ರ ಬಿಎಂ ಭಾಷಾ ಮನೆಗೆ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳದ ಮುಖಂಡರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು 14 ಮಂದಿ ಕಾರ್ಯತರ್ತರನ್ನು ಬಂಧಿಸಿದ್ದಾರೆ.
ಬಂಟ ಸಮುದಾಯದ ಯುವತಿಯನ್ನು ಇಸ್ಲಾಂಗೆ ಮತಾಂತರಿಸಿ ಭಯೋತ್ಪಾದನಾ ಚಟುವಟಿಕೆಗೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. ಜನಜಾಗೃತಿಗಾಗಿ ಉಳ್ಳಾಲದ ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಮಡಿಕೇರಿ ಮೂಲದ ಬಂಟ ಸಮುದಾಯದ ಯುವತಿ ಮರಿಯಮ್ ಆಲಿಯಾಸ್ ದೀಪ್ತಿ ಮಾರ್ಲ ಎಂಬಾಕೆಯನ್ನು ಲವ್ ಜಿಹಾದ್ ನಡೆಸಿ ಅನಾಸ್ ನಿಂದ ದೀಪ್ತಿ ವಿವಾಹ ಮಾಡಲಾಗಿದೆ. ದೀಪ್ತಿ ಮಾರ್ಲ ಸೇರಿ ಇಡೀ ಕುಟುಂಬದ ವಿರುದ್ಧ ತನಿಖೆ ನಡೆಸಬೇಕು ಎಂದು ವಿಎಚ್ ಪಿ ಆಗ್ರಹಿಸಿದೆ.
ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ವಿಹಿಂಪ, “ಜಿಲ್ಲೆಯಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಪ್ರೀತಿ-ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಅಂಥದ್ದೇ ಘಟನೆ ಉಳ್ಳಾಲಕ್ಕೆ ದಾಳಿ ಮಾಡಿದಾಗ ಬಹಿರಂಗವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಆಗ್ರಹಿಸಿದ್ದ ವಿಎಚ್‌ಪಿ ಮುಖಂಡರು, ಆಗಸ್ಟ್ 11ರಂದು ಉಳ್ಳಾಲದಾದ್ಯಂತ ಪೋಸ್ಟ್ ಕಾರ್ಡ್ ಚಳವಳಿ ನಡೆಸಲಿರುವುದಾಗಿ ವಿಎಚ್‌ಪಿ ಪ್ರಕಟಿಸಿತ್ತು.