ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ಆಯೋಜಿಸಿದ್ದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭವು ಮಂಗಳೂರಿನ ನಂದಿನಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರಿನ ಅಧ್ಯಕ್ಷರಾದ ಶ್ರೀ ಪದ್ಮನಾಭ ಜೋಗಿ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಿವಾಸ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ, ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ನವೀನ ಕುಮಾರ್ ಎಂ.ಎಸ್., ದಿ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ್ ಕೋ-ಆಪರೇಟಿವ್ ಬ್ಯಾಂಕ್, ಮಂಗಳೂರಿನ ಅಧ್ಯಕ್ಷರಾದ ಶ್ರೀ ಅಂಬರೀಷ್ ಯು.ಹೆಚ್., ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಯೋಗೀಶ್ ದೇವಾಡಿಗ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಮಾಜಿ ಉಪಾಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಭಾಗವಹಿಸಿದ್ದರು.
ಸಮಾರಂಭದಲ್ಲಿ ನಿವೃತ್ತ ವಾಹನ ಚಾಲಕರ ಸೇವೆಯನ್ನು ಸ್ಮರಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ನಡೆದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಪದ್ಮನಾಭ ಜೋಗಿ, ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಿವಾಸ್, ಗಣ್ಯ ಅತಿಥಿಗಳು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿರುವುದು.
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ನಡೆದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವುದು.
Discover more from Coastal Times Kannada
Subscribe to get the latest posts sent to your email.







Discussion about this post